ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಬಹುಕೋಟಿ ಹಗರಣ..!

ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಬಹುಕೋಟಿ ಹಗರಣ..!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವಂತಹ ಬೃಹತ್ ಕೋಟಿ ಹಗರಣ ಬಿಬಿಎಂಪಿ ಅಲ್ಲೂ ಕೂಡ ಹಗರಣವಾಗಿದೆ ಆದ್ದರಿಂದ 9 ಅಧಿಕಾರಿಗಳ ವಿರುದ್ಧ ಇದೀಗ ದೂರು ದಾಖಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಹೌದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂಬ ಮಾಹಿತಿ ಇದೀಗ ಹೊರ ಬಿದ್ದಿದ್ದು ಒಟ್ಟು ಒಂಬತ್ತು ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ಇದನ್ನೂ ಓದಿ: ಶ್ರೀರಾಮುಲು ಬಂಧನ..!

ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಕೊರೊನಾ ಸಮಯದಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಸದ್ಯ ಅಕ್ರಮ ಹಣ ವರ್ಗಾವಣೆ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದೆ.

ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಈ ಬಹುಕೋಟಿ ಹಗರಣ ನಡೆದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಲಾಗಿದ್ದು ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಸುಬೇಶ್, ಎಸ್.ಎಸ್. ದೇವಕಿ, ಬಿ.ಗಾಯತ್ರಿ, ಜಿ.ಎನ್. ಸುಬ್ಬರಾಮಯ್ಯ, ಎಸ್.ವಿ.ಗಿರಿಯಪ್ಪ, ಎನ್.ಗೀತಾ, ಕುಮಾರಿ ಕುಸುಮಾ, ಲಿಂಗಣ್ಣ ಗುಂಡಳ್ಳಿ, ಸತ್ಯಮೂರ್ತಿ. ಇವರು ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಧಿಕಾರಿಗಳು.

ಒಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಬಹುಕೋಟಿ ಹಗರಣಗಳು ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗುತ್ತಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ಹೋದರೆ ರಾಜ್ಯದಲ್ಲಿ ಇದೇ ರೀತಿ ಮುಂದುವರೆಯುತ್ತದೆ ಎಂದು ಜನ ಆಕ್ರೋಶ ಅವರ ಹಾಕಿದ್ದಾರೆ.

Related