ಜೈ ಶ್ರೀರಾಮ್ ಹೇಳದಿದ್ದಕ್ಕೆ ಮುಸ್ಲಿಂ ವೃದ್ಧನಿಗೆ ಥಳಿತ

ಜೈ ಶ್ರೀರಾಮ್ ಹೇಳದಿದ್ದಕ್ಕೆ ಮುಸ್ಲಿಂ ವೃದ್ಧನಿಗೆ ಥಳಿತ

ಕೊಪ್ಪಳ: ಅಂದ ಮುಸ್ಲಿಂ ವೃದ್ಧನಿಗೆ ಯುವಕರು ಕುಡಿದ ಮತ್ತಿನಲ್ಲಿ ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯ ಮಾಡಿ ವೃದ್ಧನಿಗೆ ಮನಸೊಚ್ಚೆ ತಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನ.25ರಂದು ನಡೆಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ಮೆಹಬೂಬ್ ನಗರದ ಹುಸೇನಸಾಬ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲಸದ‌ ನಿಮಿತ್ತ ಹೊಸಪೇಟೆಗೆ ಹೋಗಿ ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೋ ನಿಲ್ದಾಣದ ಬಳಿ ಕಾಯುತ್ತಿದ್ದೆ. ಈ ವೇಳೆ ಬೈಕ್ ಮೇಲೆ ಬಂದ ಇಬ್ಬರು ಯುವಕರು ಬಲವಂತವಾಗಿ ಬೈಕ್ ಮೇಲೆ ಕೂರಿಸಿಕೊಂಡು ಪಂಪಾನಗರ ಬಳಿ ಕರೆದುಕೊಂಡು ಹೋದರು.

ನಂತರ ಮುಸ್ಲಿಂ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಕೊಲೆ ಬೆದರಿಕೆ ಹಾಕಿದರು. ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.

ಯುವಕರ ಗುಂಪು ಬಿಯರ್ ಬಾಟಲಿಯನ್ನು ಒಡೆದು ಗಾಜಿನ ತುಂಡಿನಿಂದ ನನ್ನ ಗಡ್ಡವನ್ನು ಕತ್ತರಿಸಲು ಪ್ರಯತ್ನಿಸಿದರು. ಈ ಪ್ರಯತ್ನ ಯಶಸ್ವಿಯಾಗದಿದ್ದಾಗ ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದರು. ಕೂಡಲೇ ಅದನ್ನು ನಂದಿಸಿದೆ. ನನಗೆ ಕಣ್ಣು ಕಾಣಿಸುವುದಿಲ್ಲ ಎಂದು ಹೇಳಿದರೂ, ಬಿಡದ ಯುವಕರು ಧಳಿಸಿದರು. ಬಳಿಕ ನನ್ನ ಬಳಿಯಿದ್ದ ಹಣ ದೋಚಿಕೊಂಡು ಹೋದರು. ಬೆಳಗಿನ ಜಾವ ಕುರಿ ಕಾಯುವ ಹುಡುಗರು ನನ್ನನ್ನು ರಕ್ಷಣೆ ಮಾಡಿ, ಮನೆಗೆ ತಲುಪಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Related