ಏ. 28ರಂದು ಉತ್ತರ ಕರ್ನಾಟಕದಲ್ಲಿ ಮೋದಿ ಅಬ್ಬರ

ಏ. 28ರಂದು ಉತ್ತರ ಕರ್ನಾಟಕದಲ್ಲಿ ಮೋದಿ ಅಬ್ಬರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರ್ನಾಟಕ ರಾಜ್ಯಕ್ಕೆ ಎಂಟ್ರಿ ನೀಡುತ್ತಿದ್ದು ಇದೇ ಏಪ್ರಿಲ್ 28ರಂದು ಉತ್ತರ ಕರ್ನಾಟಕ ಭಾಗಕ್ಕೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂಬ ಮಾಹಿತಿ ಎಂದು ಹೊರ ಬಿದ್ದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮೋದಿ ಅಬ್ಬರಿಸಲಿದ್ದಾರೆ

ಉತ್ತರ ಕರ್ನಾಟಕ ಪ್ರದೇಶವು ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದು, ಪ್ರಧಾನಿ ಮೋದಿಯವರ ಆಗಮನದಿಂದಾಗಿ ಪಕ್ಷದ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ. ಮೋದಿಯವರು ಈ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಆರು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಏಪ್ರಿಲ್ 28 ರಂದು ಪ್ರಧಾನಿ ಮೋದಿ ದಾವಣಗೆರೆ, ಕಾರವಾರ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಹೊಸ ಮುಖಗಳನ್ನು ಕಣಕ್ಕಿಳಿಸಿರುವ ವಿಜಯಪುರ, ಕೊಪ್ಪಳ ಮತ್ತು ಕಲಬುರಗಿ ಕ್ಷೇತ್ರಗಳಲ್ಲಿಯೂ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

 

Related