ಶಿಗ್ಗಾಂವಿಯಲ್ಲಿ ಭುಗಿಲೆದ್ದ ಬಂಡಾಯದ ಕಾವು!

ಶಿಗ್ಗಾಂವಿಯಲ್ಲಿ ಭುಗಿಲೆದ್ದ ಬಂಡಾಯದ ಕಾವು!

ಹಾವೇರಿ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಕುಟುಂಬ ರಾಜಕಾರಣ ಮಾಡುತ್ತಿದೆ ಎಂಬುದಕ್ಕೆ ಇದೀರಾ ಮತ್ತೊಂದು ದೊಡ್ಡ ಉದಾಹರಣೆ ಹೊರ ಬಿದ್ದಿದೆ.

ಹೌದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಮಗನಾದ ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಮುಗಿಲೆದ್ದಿದ್ದು, ಇದರ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಮತ್ತು ಹಾವೇರಿಯ ಸಂಸದರಾಗಿರುವಂತಹ ಬಸವರಾಜ್ ಬೊಮ್ಮಾಯಿ ಅವರಿಗೆ ಶಿಗ್ಗಾಂವಿ ಉಪಚುನಾವಣೆಯ ಟಿಕೆಟ್ ಕೊಡಿಸಿರುವುದರಿಂದ ಇದೀಗ ಬಿಜೆಪಿ ಪಕ್ಷದಲ್ಲೇ ಮತ್ತೆ ಅಸಮಾಧಾನ ಭುಗಿಲೆದ್ದಿದೆ.

ಶಿಗ್ಗಾಂವಿ ಉಪಚುನಾವಣೆಗೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದದ ಹಿನ್ನೆಲೆಯಲ್ಲಿ ಅಸಮಧಾನ ಭುಗಿಲೆದ್ದಿದೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಇನ್ನು ಶಿಗ್ಗಾಂವಿ ಉಪಚುನಾವಣೆಗೆ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಹಾಗೂ ಟಿಕೆಟ್ ಆಕಾಂಕ್ಷಿ ಶ್ರೀಕಾಂತ್ ದುಂಡಿಗೌಡರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಶಿಗ್ಗಾಂವಿ ಕ್ಷೇತ್ರದಲ್ಲಿ ಇಂತಹ ಯಾವುದೇ ಬೆಳವಣಿಗೆಯಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ, ಮುಂಬರುವ ಉಪಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲಾಗುವುದು ಎಂದು ಹೇಳಿದರು. ತಮ್ಮ ರಾಜಕೀಯ ಗುರು ಬಸವರಾಜ ಬೊಮ್ಮಾಯಿ ಅವರು ನನಗೆ ಅನ್ಯಾಯ ಮಾಡಿದರು. ಟಿಕೆಟ್ ಕೊಡಿಸುವುದಾಗಿ ಹೇಳುತ್ತ, ತಮ್ಮ ಮಗನಿಗೆ ಟಿಕೆಟ್ ಕೊಡಿಸಿದರು. ನನಗೆ ಹಾಗೂ ಕಾರ್ಯಕರ್ತರಿಗೆ ನೋವಾಗಿದೆ’ ಎಂದು ಹೇಳಿದ್ದಾರೆ. ನಮ್ಮ ಮುಂದಿನ ನಡೆ ಬಗ್ಗೆ ಚರ್ಚಿಸಲು ಅಕ್ಟೋಬರ್ 24ರಂದು ಸಂಜೆ ಹಿರಿಯರು ಮತ್ತು ಹಿತೈಷಿಗಳ ಸಭೆ ಕರೆದಿರುವೆ. ಅವರ ಅಭಿಪ್ರಾಯ ಪಡೆದು ನನ್ನ ನಿರ್ಧಾರ ಪ್ರಕಟಿಸುವೆ ಎಂದು ಅವರು ತಿಳಿಸಿದ್ದಾರೆ.

 

Related