ಶಿರಸಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕ ರಾಜ್ಯದಲ್ಲಿ ಆಪರೇಷನ್ ಹಸ್ತ ಮತ್ತು ಆಪರೇಷನ್ ಕಮಲ ಜೋರಾಗಿ ನಡೆಯುತ್ತಿದ್ದು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಹಾಗೂ ಅವರ ನೂರಾರು ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ.
ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜಿಪಂ ಮಾಜಿ ಸದಸ್ಯೆ ರೂಪಾ ನಾಯ್ಕ, ಮಂಗಲಾ ನಾಯ್ಕ, ಪ್ರಶಾಂತ ಗೌಡ್ರ ಮಲ್ಲಾಸರ್ಜನ, ಮುಖಂಡರಾದ ದ್ಯಾಮಣ್ಣ ದೊಡ್ಮನಿ, ರಘು ಗುಡ್ನಾಪುರ, ದೇವರಾಜ ರಾಮಾಪುರ, ಶಶಿಧರ ನಾಯ್ಕ, ಜಿ.ವಿ. ಭಟ್ಟ ಬಿಸ್ಲಕೊಪ್ಪ ಅರವಿಂದ ತೆಲಗುಂದ ಸೇರಿಂದತೆ ಇನ್ನಿತರ ಮುಖಂಡರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡರು.