ಕಮಲದಲ್ಲಿ ಮಹತ್ವದ ಬೆಳವಣಿಗೆ!

ಕಮಲದಲ್ಲಿ ಮಹತ್ವದ ಬೆಳವಣಿಗೆ!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ವಿಧಾನಮಂಡಲ ಅಧಿವೇಶನವ ವಿಪಕ್ಷನಾಯಕರಿಲ್ಲದೇಯೇ ಮುಗಿದು ಹೋಗಿದೆ. ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ ಅವರನ್ನ ಬಿಡುಗಡೆ ಮಾಡಿರುವುದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇದರ ಮಧ್ಯೆ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ಕೊಟ್ಟಿರುವ ಹೈಕಮಾಂಡ್, ಇದೀಗ ಸಿಟಿ ರವಿ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.

ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಇಂದು ನವದೆಹಲಿಗ ಬರುವಂತೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆ(ಜುಲೈ 31) ರಾತ್ರಿ ಅಷ್ಟೇ ಚಿಕ್ಕಮಗಳೂರಿಗೆ ಆಗಮಿಸಿದ್ದ ಸಿ.ಟಿ ರವಿ ಇಂದು ಬೆಳಗ್ಗೆ ಬೆಂಗಳೂರಿಗೆ ತೆರಳಿದ್ದಾರೆ.

ಸಿಟಿ.ರವಿಗೆ ಕೊಕ್ ನೀಡಿದ ಬಳಿಕ ರಾಷ್ಟ್ರೀಯ ಪದಾಧಿಕಾರಿ ಪಟ್ಟಿಯಲ್ಲಿ ಕರ್ನಾಟಕದಿಂದ ಬಿ.ಎಲ್.ಸಂತೋಷ್ ಹೊರತು ಪಡಿಸಿದರೆ ಇನ್ನೊಬ್ಬರ ಹೆಸರಿಲ್ಲ, ಕರ್ನಾಟಕಕ್ಕೆ ಮಾನ್ಯತೆಯೂ ಇಲ್ಲ. ಈ ಚರ್ಚೆ ಜೊತೆಗೆ ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಾರೆ ಎನ್ನುವ ಕುತೂಹಲವೂ ಹುಟ್ಟಿದೆ. ಇದೇ ಕಾರಣಕ್ಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ. ಇತ್ತೀಚೆಗಷ್ಟೇ ಸಿ.ಟಿ.ರವಿ. ಬಿಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದರು. ಅಲ್ಲದೇ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಸಹ ಸಿಟಿ ರವಿ ಅವರಿಗೆ ಅಧ್ಯಕ್ಷ ಸ್ಥಾನ ಎಂದು ಬಹಿರಂಗವಾಗಿಯೇ ಹೇಳಿದ್ದರು. ಇದೆಲ್ಲರ ಮಧ್ಯೆ ಇದೀಗ ಹೈಕಮಾಂಡ್​ನಿಮದ ಬುಲಾವ್ ಬಂದಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

 

Related