ಭೀಕರ ಅಪಘಾತ ನಾಲ್ವರ ದುರ್ಮರಣ

ಭೀಕರ ಅಪಘಾತ ನಾಲ್ವರ ದುರ್ಮರಣ

ಹುಬ್ಬಳ್ಳಿ: ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಸ್ಥಳದಲ್ಲಿ ನಾಲ್ವರು ಮೃತಪಟ್ಟಿದ್ದು ಇನ್ನು ನಾಲ್ವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಹಾಸನದ ಮಣಿಕಂಠ (26), ಪವನ(23), ಚಂದನ (31) ಮತ್ತು ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು.

ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

 

Related