ಕೇಂದ್ರ ವಿತ್ತ ಸಚಿವೆ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಮಹಿಳೆ!

ಕೇಂದ್ರ ವಿತ್ತ ಸಚಿವೆ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಮಹಿಳೆ!

ಆನೇಕಲ್: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿಗೆ ವಂಚನೆಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದಾವೆ. ಇದರಿಂದ ಸಾಮಾನ್ಯ ಜನರು ತಮ್ಮ ಹಣಗಳನ್ನು ಕಳೆದುಕೊಂಡು ಬೀದಿಗೆ ಬರುವಂತ ಪರಿಸ್ಥಿತಿ ಒದಗಿದೆ.

ಹೌದು, ವಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರ ಹೆಸರನ್ನು ಹೇಳಿಕೊಂಡು ಬ್ಯಾಂಕುಗಳಿಂದ ಸಾಲ ಕಳುಹಿಸಿದ್ದಾಗಿ ಜನರಿಗೆ ನಂಬಿಸಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಪವಿತ್ರ ಎಂಬ ವಂಚಕೆ ನಗರದಲ್ಲಿ ಸುಮಾರು ವರ್ಷಗಳಿಂದ ಜನಸಾಮಾನ್ಯರಿಗೆ ಸಾಲ ಕೊಡಿಸುವುದಾಗಿ ಹೇಳಿ ಮೊದಲೇ ಹಣ ಪಡೆದುಕೊಂಡು ವಂಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಆ್ಯಂಡ್ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

ಟ್ರಸ್​​ಗೆ ಆರ್​ಬಿಐನಿಂದ 17 ಕೋಟಿ ಬಂದಿರುವುದಾಗಿ ಹಾಗೂ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರು, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.

ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದಾಳೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

Related