ʼ2ಬಿʼ ಕೋಟಾ ರದ್ದು: ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್

ʼ2ಬಿʼ ಕೋಟಾ ರದ್ದು: ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕಳೆದ ತಿಂಗಳು ಕರ್ನಾಟಕ ರಾಜ್ಯ ಸರ್ಕಾರ ಮುಸ್ಲಿವರ ಮೀಸಲಾತಿ ʼ2ಬಿʼ ಯನ್ನು   ರದ್ದುಗೊಳಿಸಬೇಕೆಂದು ಆದೇಶವನ್ನು ಹೊರಡಿಸಿತ್ತು.

ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ಸಹ ಮುಂದೂಡಿದೆ.

ಮುಂದಿನ ವಿಚಾರಣೆಯವರೆಗೆ ಮೀಸಲಾತಿ ನಿಯಮದಡಿ ಯಾವುದೇ ಪ್ರವೇಶಾತಿ ಅಥವಾ ನೇಮಕಾತಿ ನಡೆಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಈ ಹಿಂದೆ ರಾಜ್ಯ ಸರ್ಕಾರ ಹೇಳಿತ್ತು.

ಕಳೆದ ತಿಂಗಳು ಏಪ್ರಿಲ್ 25ರಂದು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಮತ್ತೆ ವಿಚಾರಣೆಯನ್ನು ಮುಂದೂಡಿದೆ. ನಾಳೆ ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು ಮತದಾನ ಮುಗಿದು ಫಲಿತಾಂಶ ಬಂದ ಮೇಲೆಯೇ ಇನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ಸರ್ಕಾರವು ಈ ಹಿಂದೆ ವಿಚಾರಣೆಯನ್ನು ಮುಂದೂಡುವಂತೆ ಕೋರಿತ್ತು. ಮುಂದಿನ ವಿಚಾರಣೆಯ ದಿನಾಂಕದವರೆಗೆ ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದ ಆದೇಶದ ಆಧಾರದ ಮೇಲೆ ಯಾವುದೇ ಹೊಸ ನೇಮಕಾತಿಗಳು ಅಥವಾ ಪ್ರವೇಶಗಳನ್ನು ಮಾಡಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರು ನ್ಯಾಯಪೀಠಕ್ಕೆ ಭರವಸೆ ನೀಡಿದ್ದರು.

ನ್ಯಾಯಪೀಠವು, ಕರ್ನಾಟಕ ಸರ್ಕಾರ ಮತ್ತು ಇತರರಿಗೆ ಅರ್ಜಿಗಳ ಕುರಿತು ನೋಟಿಸ್ ಜಾರಿ ಮಾಡಿ ಈ ಹಿಂದೆ ಸೂಚಿಸಿತ್ತು. ಕಳೆದ ವಾರದ ವಿಚಾರಣೆಯ ಸಂದರ್ಭದಲ್ಲಿ, ಸರ್ಕಾರದ ಆದೇಶವು “ತಪ್ಪಾದ ಊಹೆಗಳನ್ನು” ಆಧರಿಸಿದೆ ಎಂದು ತೋರುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

Related