ನೂಕಾಟ ಪ್ರಕರಣ: ಪುರಸಭೆ ಸದಸ್ಯೆಗೆ ಗರ್ಭಪಾತ

ನೂಕಾಟ ಪ್ರಕರಣ: ಪುರಸಭೆ ಸದಸ್ಯೆಗೆ ಗರ್ಭಪಾತ

ಬಾಗಲಕೋಟೆ : ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪುರಸಭೆ ಸದಸ್ಯೆಯರ ನೂಕಾಟದಲ್ಲಿ ಕೆಳಗೆ ಬಿದ್ದಿದ್ದ ಗರ್ಭಿಣಿ ಸದಸ್ಯೆ ಚಾಂದಿನಿ ನಾಯಕ್ ಅವರಿಗೆ ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಪಾತವಾಗಿದೆ.

ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ನ.9ರಂದು ಚುನಾವಣೆ ನಡೆದಿತ್ತು. ಈ ವೇಳೆ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕಾರ್ಯಕರ್ತರ ತಳ್ಳಾಟದಿಂದ ಸದಸ್ಯೆ ಚಾಂದಿನಿ ನಾಯಕ್ ಕೆಳಕ್ಕೆ ಬಿದ್ದಿದ್ದರು. ಇದರಿಂದ ಹೊಟ್ಟೆಗೆ ಏಟು ಬಿದ್ದು, ಮಗುವಿನ ಬೆಳವಣಿಗೆಗೆ ಹೊಡೆತ ಬಿದ್ದಿತ್ತು. ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಪಾತವಾಗಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಏರ್ಪಟ್ಟು ಸದಸ್ಯೆಯರಾದ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ, ಗೋದಾವರಿ ಬಾಟ್‌ರನ್ನು ಎಳೆದಾಡಿದ್ದರು. ಆ ವೇಳೆ ಚಾಂದಿನಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು.

 

Related