ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು

ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು

ರಾಮನಗರ : ಮಕ್ಕಳಿಗೆ ಜಿಲ್ಲೆಯಲ್ಲಿ ಮದ್ಯಪಾನ ಮಾಡಿಸಿ ಅವರ ಆಟೋಟಪಗಳನ್ನು ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ನಡೆದಿದೆ.

ತಾಲೂಕಿನ ಗ್ರಾಮದ ಬಾಳೆ ತೋಟದಲ್ಲಿ 10 ವರ್ಷದೊಳಗಿನ 7 ಮಕ್ಕಳಿಗೆ ಬಾಡೂಟದ ಜತೆಗೆ ಮದ್ಯ ಕೊಟ್ಟು ಕುಡಿಸಿ ವೀಡಿಯೋ ಚಿತ್ರೀಕರಣ ಮಾಡಲಾಗಿದೆ.
ಮದ್ಯ ಕುಡಿದ ಬಳಿಕ ಮಕ್ಕಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು, ಬಾಲಕನೊಬ್ಬ ತನಗೆ ಮತ್ತಷ್ಟು ಮದ್ಯ ಬೇಕು ಎಂದು ಕೂಗಾಡುತ್ತಾನೆ.

ಈ ವೀಡಿಯೋ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಕೃತ್ಯ ಎಸಗಿದ ವಿಕೃತ ಮನಸ್ಸಿನ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Related