ಜಮೀರ್ ನಿವಾಸದ ಮೇಲೆ ಎಸಿಬಿ ದಾಳಿ

ಜಮೀರ್ ನಿವಾಸದ ಮೇಲೆ ಎಸಿಬಿ ದಾಳಿ

ಇಂದು ಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸ ಸೇರಿದಂತೆ ಐದು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಜಮೀರ್ ಅವರ ಅಭಿಮಾನಿಗಳು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ.
ಯಲಹಂಕ ಸಬ್ ಡಿವಿಷನ್ ಎಸಿಪಿ ಸೇರಿ ಪೊಲೀಸರಿಂದ ಭದ್ರತೆ ನೀಡಲಾಗಿದೆ. ಬೆಂಗಳೂರಿನ ಬಂಬೂ ಬಜಾರ್ ನಲ್ಲಿರೋ ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಬೆಳಗ್ಗೆ ಮೂರ್ನಾಲ್ಕು ಜೀಪ್ ಗಳಲ್ಲಿ ಬಂದಿರೋ ಎಸಿಬಿ ಟೀಂ ದಾಳಿ ನಡೆಸಿದೆ.  ಎಸ್ ಪಿ ಯತೀಶ್ ಚಂದ್ರ ಅವರ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿಯೇ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ಅಸಮತೋಲನ ಆಸ್ತಿ ಗಳಿಕೆ ಹಿನ್ನೆಲೆ ಸರ್ಚ್ ವಾರೆಂಟ್ ಪಡೆದು ಎಸಿಬಿ ತಂಡ ದಾಳಿ ನಡೆಸಿದೆ. ದಾಳಿ ಹಿನ್ನೆಲೆ ಶಾಸಕರ ನಿವಾಸ, ಕಚೇರಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.


ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 5 ಕಡೆ ದಾಳಿ ನಡೆಸಿದ್ದಾರೆ. ಕಂಟೋನ್ಮೆಂಟ್ ರೋಡ್ ಶಾಸಕರಾದ ಶ್ರೀ ಜಮೀರ್ ಅಹಮದ್ ಖಾನ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆಯೋ ದಾಳಿ ನಡೆದಿದೆ.


ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣವನ್ನು ಎಸಿಬಿ ದಾಖಲಿಸಿಕೊಂಡಿತ್ತು.

Related