ಅಪಘಾತ ಸ್ಥಳದಲ್ಲೇ ಸಾವು

ಅಪಘಾತ ಸ್ಥಳದಲ್ಲೇ ಸಾವು

ಪ್ರಜಾವಾಹಿನಿ-ತುಮಕೂರು : ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.ಮಿನಿ ಬಸ್ಸು ಚಾಲಕ ಕಿಶೋರ್(೪೦), ಬಸ್ಸಿನಲ್ಲಿದ್ದ ಬೆಂಗಳೂರು ಮೂಲದ ಯುವತಿ ಪೂಜಾ(೩೦) ಮೃತರು.ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಿನಿ ಬಸ್ಸಿನಲ್ಲಿದ್ದ ೧೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಘಟನೆಗೆ ಸಂಬAಧಿಸಿದAತೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related