ಕಲಬೆರಕೆ ಆಹಾರ ನೀಡುವ ಹೋಟೆಲ್​ಗಳ ಮೇಲೆ ಕ್ರಮ: ಗುಂಡೂರಾವ್

ಕಲಬೆರಕೆ ಆಹಾರ ನೀಡುವ ಹೋಟೆಲ್​ಗಳ ಮೇಲೆ ಕ್ರಮ: ಗುಂಡೂರಾವ್

ಮಂಗಳೂರು: ಇತ್ತೀಚಿಗೆ ಹೋಟೆಲ್ ಗಳಲ್ಲಿ ಕಲಬೆರಿಕೆ ಆಹಾರ ನೀಡುತ್ತಿರುವುದರಿಂದ ಗ್ರಾಹಕರಿಗೆ ಆರೋಗ್ಯದಲ್ಲಿ ಏರುಪೇರು ಆಗುತ್ತಿದೆ ಆದ್ದರಿಂದ ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಮುಂದಾಗಿದ್ದು ಅಸುರಕ್ಷಿತ/ಕಲಬೆರಿಕೆ ಆಹಾರಗಳನ್ನು ಪೂರೈಸುವ ಹೋಟೆಲ್ ಗಳ ವಿರುದ್ಧ ನಿರ್ದಾಕ್ಷಣವಾಗಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವರಾಗಿರುವಂತಹ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಆಹಾರ ಗುಣಮಟ್ಟ ಪರಿಶೀಲನೆ ಮಾಡುತ್ತಿದ್ದೇವೆ. ಇದುವರೆಗೆ ಆಹಾರ ಸುರಕ್ಷತಾ ಇಲಾಖೆ ಇದೆಯೆಂದು ಜನರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಅಧಿಕಾರಿಗಳಿಗೆ ಸ್ಪಷ್ಟ ಮಾರ್ಗಸೂಚಿ ನೀಡಿದ್ದೇವೆ ಎಂದರು. ಇದನ್ನೂ ಓದಿ: ಈರುಳ್ಳಿ ಬೆಲೆ ಏರಿಕೆ

ಹೊಟೆಲ್ ರೆಸ್ಟೊರೆಂಟ್​​ಗಳಲ್ಲಿ ಆಹಾರದ ತಯಾರಿ ಪರಿಶೀಲನೆಗೆ ಹೇಳಿದ್ದೇವೆ. ಪ್ರತಿ ತಿಂಗಳು ಕೆಲ ಫುಡ್ ಐಟಂ ತಗೊಂಡು ವಿಶೇಷ ತಪಾಸಣೆ ಮಾಡುತ್ತಿದ್ದೇವೆ. ಮಾಂಸದಂಗಡಿ, ಆಹಾರ ಉದ್ದಿಮೆಗಳಲ್ಲಿ ತಪಾಸಣೆ ಮಾಡುತ್ತಿದ್ದೇವೆ. ಪ್ರತಿ ತಿಂಗಳು ವರದಿ ಬಿಡುಗಡೆಗೆ ಸೂಚಿಸಿದ್ದೇವೆ. ಜಾಗೃತಿ ಮತ್ತು ಕ್ರಮ ಎರಡೂ ಆಗುತ್ತದೆ ಎಂದು ಅವರು ಹೇಳಿದರು.

ಆಗಸ್ಟ್​ನಲ್ಲಿ ಕೇಕ್, ಖೋವಾ ಐಟಂ ಎಲ್ಲಾ ಪರೀಕ್ಷೆ ಮಾಡಿದ್ದೇವೆ. ಅವುಗಳ ವರದಿ‌ ಇನ್ನಷ್ಟೇ ಬರಬೇಕಿದೆ. ಮುಂದಿನ ತಿಂಗಳು ಬೇರೆ ಆಹಾರವನ್ನು ಪರಿಶೀಲನೆಗೆ ತೆಗೆದುಕೊಳ್ಳಲಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಕಬಾಬ್, ಗೋಬಿ ಮಂಚೂರಿಗೆ ಹೆಚ್ಚಿನ ಬಣ್ಣ ಬೆರೆಸುತ್ತಿದ್ದರು. ಕೆಎಫ್​ಸಿ ಸೇರಿದಂತೆ 4 ಆಹಾರ ಉದ್ದಿಮೆಗಳ ಲೈಸನ್ಸ್ ಸಸ್ಪೆಂಡ್ ಮಾಡಿದ್ದೇವೆ. ನಾವು ಆಗಾಗ ಕಾರ್ಯಾಚರಣೆ ಮಾಡುತ್ತಾ ಇರುತ್ತೇವೆ. ಜಾಗೃತಿ ಜೊತೆಗೆ ಕ್ರಮವನ್ನೂ ಕೈಗೊಳ್ಳಲಾಗುತ್ತಿದೆ. ಆಹಾರಕ್ಕೂ ಆರೋಗ್ಯಕ್ಕೂ ಸಂಬಂಧ ಇದೆ. ಇದನ್ನು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

 

Related