ಎಸ್‌ ಟಿ ಎಸ್‌ ವಿರುದ್ಧ ಕಾರ್ಯಕರ್ತರು ಪ್ರತಿಭಟನೆ

ಎಸ್‌ ಟಿ ಎಸ್‌ ವಿರುದ್ಧ ಕಾರ್ಯಕರ್ತರು ಪ್ರತಿಭಟನೆ

ಬೆಂಗಳೂರು:  ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿ ಶಾಸಕರಾಗಿ ಕಾಂಗ್ರೆಸ್ಗೆ ಮತ ಚಲಾವಣೆ ಮಾಡಿದ್ದು ಪಕ್ಷಕ್ಕೆ ಮಾಡಿರುವ ದ್ರೋಹ ಎಂದು ಕಾರ್ಯಕರ್ತರ ಕಿಡಿಗಳಿದ್ದಾರೆ, ಯಶವಂತಪುರ ಕೆಂಗೇರಿ ಉಪನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ ರಸ್ತೆಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಸೋಮಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಯಶವಂತಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಅವರನ್ನು ಗೆಲ್ಲಿಸಲಾಗಿತ್ತು ಆದರೆ ಬಿಜೆಪಿಯಲ್ಲಿ ಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿಯೂ ಮಾಡಲಾಗಿತ್ತು ಈಗ ಶಾಸಕರಾಗಿ ಆಯ್ಕೆಯಾಗಿದ್ದರು ಅಧಿಕಾರದ ಅಪಹಪಿಗಾಗಿ ಅಡ್ಡ ಮತದಾನ ಮಾಡುವ ಮೂಲಕ ಪಕ್ಷಕ್ಕೆ ಮೋಸ ಮಾಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ

Related