ನಟ ದರ್ಶನ್ ಸೆಂಟ್ರಲ್ ಜೈಲಿಗೆ;  ಎಷ್ಟು ದಿನ ಗೊತ್ತಾ?

ನಟ ದರ್ಶನ್ ಸೆಂಟ್ರಲ್ ಜೈಲಿಗೆ;  ಎಷ್ಟು ದಿನ ಗೊತ್ತಾ?

ಬೆಂಗಳೂರು: ಜೂನ್ 11ರಂದು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿ ಬೆಂಗಳೂರಿನಲ್ಲಿರುವ ಮೋರಿಗೆ ಎಸೆದಿದ್ದರು.

ಇನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳು ನಟ ದರ್ಶನ್ ಮತ್ತು ದರ್ಶನ್ ಗೆಳತಿ ಪವಿತ್ರ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ್ದು, ಈಗಾಗಲೇ ಪವಿತ್ರ ಗೌಡ ಅವರು ಪರಪ್ಪನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಕಾರಣ ನಟ ದರ್ಶನವರೆಗೂ ಕೂಡ ಇಂದು ಜೂನ್ 22ರಂದು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ಇದರಿಂದ ನಟ ದರ್ಶನ್ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲಿನ ದರ್ಶನವನ್ನು ಪಡೆದಿದ್ದಾರೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್‌ನ ನೂತನ ಸಚಿವರು ಹಾಗೂ ಸಂಸದರಿಗೆ ಅಭಿನಂದನಾ ಕಾರ್ಯಕ್ರಮ

ಹೌದು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಪಾಲಾಗಿದ್ದಾರೆ. ಇಂದು ಪೊಲೀಸ್‌ ಕಸ್ಟಡಿ  ಅಂತ್ಯವಾದ ಹಿನ್ನೆಲೆ  ಎಸಿಎಂಎಂ ಕೋರ್ಟ್‌ಗೆ  ನಟ ದರ್ಶನ್ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜುಲೈ 4ರವರೆಗೆ  ಅಂದರೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಎರಡನೇ ಬಾರಿ ಜೈಲು ಪಾಲಾದ ದಾಸ

ಇಂದು ನಟ ದರ್ಶನ್ ಅವರು ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್​ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು. ಇಂದು ಕೋರ್ಟ್‌ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ 2ನೇ ಬಾರಿ ಸೆಂಟ್ರಲ್ ಜೈಲು ಸೇರಲಿದ್ದಾರೆ.

Related