ನಟ ದರ್ಶನ್ ಗೆಳತಿ ಪವಿತ್ರ ಗೌಡಗೆ ಇಂದಿನಿಂದ ಜೈಲೇ ಗತಿ..!

ನಟ ದರ್ಶನ್ ಗೆಳತಿ ಪವಿತ್ರ ಗೌಡಗೆ ಇಂದಿನಿಂದ ಜೈಲೇ ಗತಿ..!

ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಗುರುವಾರ ಜೂನ್ 20ರಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಪ್ರಮುಖ ಆರೋಪಿಯಾಗಿರುವ ಪವಿತ್ರ ಗೌಡ ಮತ್ತು ದರ್ಶನವರನ್ನು ಸೇರಿ 13 ಆರೋಪಿಗಳನ್ನು ಗುರುವಾರ 24ನೆಯ ಎಸಿಎಂಎಂ ನ್ಯಾಯಾಲಯಕ್ಕೆ ವಿಚಾರಣೆಗೆಂದು ಹಾಜರಪಡಿಸಲಾಗಿತ್ತು.

ಈ ಪ್ರಕರಣದಲ್ಲಿ ಎ1 ಆರೋಪಿ ಯಾಗಿರುವ ಪವಿತ್ರ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ. ಇನ್ನು ಮಿಕ್ಕುಳಿದ ಆರೋಪಿಗಳನ್ನು ಪೊಲೀಸ್ ಕಸ್ಟಡ್ಗೆ ನೀಡಲಾಗಿದೆ ಎಂಬ ಮಾಹಿತಿ ಇದೀಗ ತಿಳಿದು ಬಂದಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ…!

ಹೌದು, ದರ್ಶನ್ ಅಂಡ್ ಗ್ಯಾಂಗ್ ಸೇರಿಕೊಂಡು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದರ್ಶನ್ ಗೆಳತಿ ಪವಿತ್ರ ಗೌಡ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ 6 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂಬುದಾಗಿ ಮನವಿ ಮಾಡಿದರು. ಇದಕ್ಕೆ ದರ್ಶನ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಬಹುತೇಕ ವಿಚಾರಣೆ ಮುಗಿದಿದೆ. ಹಾಗಾಗಿ, ಪೊಲೀಸ್‌ ಕಸ್ಟಡಿಗೆ ನೀಡುವ ಅಗತ್ಯವಿಲ್ಲ ಎಂದರು. ಆದರೆ, ರೇಣುಕಾಸ್ವಾಮಿ ಮೊಬೈಲ್‌ ರಿಕವರಿ ಆಗಿಲ್ಲ. ಅದನ್ನು ಪತ್ತೆ ಹಚ್ಚಬೇಕಿದೆ. ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ದರ್ಶನ್, ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಿದರು.

 

Related