ಲಿಡ್ಕರ್ ರಾಯಭಾರಿಯಾದ ನಟ ಡಾಲಿ ಧನಂಜಯ್

ಲಿಡ್ಕರ್ ರಾಯಭಾರಿಯಾದ ನಟ ಡಾಲಿ ಧನಂಜಯ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಧನಂಜಯ್ ಸಿಕ್ಕಾಪಟ್ಟೆ ಬ್ಯುಸಿ  ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.

ಹೌದು, ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ. ನಟ‌ರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿ ಆಗಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ.

ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ.

ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Related