ರಿಯಾ ಜಾಮೀನು ಅರ್ಜಿ ವಜಾ

ರಿಯಾ ಜಾಮೀನು ಅರ್ಜಿ ವಜಾ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ.

ಅಲ್ಲದೇ ರಿಯಾ ಅವರ ಸಹೋದರ ಶೋಯಿಕ್ ಚಕ್ರವರ್ತಿ ಸೇರಿದಂತೆ ಉಳಿದ ಎಂಟು ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

ಈ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿರುವ ರಿಯಾ ಅವರನ್ನು ಸೆ.22 ರವರೆಗೆ ಬೈಕುಲ್ಲಾ ಜೈಲಿನಲ್ಲಿ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ರಿಯಾ ಪರ ವಕೀಲ ಜಾಮೀನಿಗಾಗಿ ಬಾಂಬೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

Related