ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ನಟ ಸಹಾಯ ಹಸ್ತ

ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ನಟ ಸಹಾಯ ಹಸ್ತ

ಆಂಧ್ರಪ್ರದೇಶ : ಕಳೆದ ಎರಡುವಾರ ಸುರಿದ ಭಾರೀ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಟಾಲಿವುಡ್ ನಟ ಪ್ರಭಾಸ್ ಸಹಾಯ ಹಸ್ತಚಾಚಿದ್ದಾರೆ.

ಇದೀಗ ಪ್ರಭಾಸ್ ನೆರವಿಗೆ ಮುಂದಾಗಿದ್ದಾರೆ. ಜನರಿಗೆ ಸಹಾಯ ಮಾಡಲು ಪ್ರಭಾಸ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿಎಂಆರ್‌ಎಫ್ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಜನರ ಕಷ್ಟಕ್ಕೆ ಮಿಡಿದ ಟಾಲಿವುಡ್ ಮೆಗಾ ಸ್ಟಾರ್ ನಟ ಚಿರಂಜೀವಿ, ಜೂನಿಯರ್ ಎನ್‌ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು, ರಾಮ್ ಚರಣ್‌ತೇಜ ಅವರು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ದೇಣಿಗೆ ನೀಡಿದ್ದರು.

Related