ನಟಿ ಭಾವನಾ ರಾಮಣ್ಣ ಈಗ ಕೆಎಂಹೆಚ್‌ ಕಪ್‌ಗೆ ರಾಯಭಾರಿ

ನಟಿ ಭಾವನಾ ರಾಮಣ್ಣ ಈಗ ಕೆಎಂಹೆಚ್‌ ಕಪ್‌ಗೆ ರಾಯಭಾರಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ನಟಿ ಭಾವನಾ ರಾಮಣ್ಣ ಅವರು ಚಂದ್ರಮುಖಿ ಪ್ರಾಣಸಖಿ  ಹಾಗೂ ಇನ್ನೂ ಹಲವಾರು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಭಾವನಾ ಅವರು ಇದೀಗ ಕಪ್‌ಗೆ ರಾಯಭಾರಿಯಾಗಿದ್ದಾರೆ.

ಹೌದು, ನಟಿ ಭಾವನಾ ರಾಯಣ್ಣ ಅವರು ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ‘ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘ’ದಿಂದ ಆಯೋಜಿಸಲಾಗಿರುವ ಕೆಎಂಹೆಚ್‌ಕಪ್ ಕ್ರಿಕೆಟ್ ಟೂರ್ನಿ ಲೋಗೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಇನ್ನು ಈ ಟೂರ್ನಿಯ ರಾಯಭಾರಿ ಆಗಿರುವ ನಟಿ ಭಾವನಾ ರಾಮಣ್ಣ ಲೋಗೊ ಬಿಡುಗಡೆ ಮಾಡಿದರು. ಇದನ್ನೂ ಓದಿ:ಪಡ್ಡೆ ಹುಡುಗರ ಕಣ್ಣು ಕುಕ್ಕುತ್ತಿರುವ ಈ ನಟಿ..!

ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘಕ್ಕೆ ಮೂವತ್ತೈದು ವರ್ಷಗಳ ಇತಿಹಾಸವಿದೆ. ಅನೇಕ ಹಿರಿಯರು ಈ ಸಂಘವನ್ನು ಕಟ್ಟಿ ಬೆಳೆಸಿದ್ದಾರೆ. ಇದೇ ಮೊದಲ ಬಾರಿಗೆ ನಮ್ಮ ಸಂಘದ ವತಿಯಿಂದ ಕೆಎಂಹೆಚ್‌ಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಸದಾ ನಮ್ಮ ಸಂಘದ ಜೊತೆಯಿರುವ ನಟಿ ಭಾವನಾ ರಾಮಣ್ಣ ಈ ಟೂರ್ನಿಯ ರಾಯಭಾರಿಯಾಗಿದ್ದಾರೆ. ಜುಲೈ 20 ಹಾಗೂ 21 ಶನಿವಾರ ಹಾಗೂ ಭಾನುವಾರ ವಿಜಯನಗರದ ಬಿ.ಜಿ.ಎಸ್ ಮೈದಾನದಲ್ಲಿ ಈ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ.

ನಾಕೌಟ್ ಪಂದ್ಯಗಳು ಆರು ಓವರ್ ಇರುತ್ತದೆ. ಫೈನಲ್ ಪಂದ್ಯ ಎಂಟು ಓವರ್ ನದಾಗಿರುತ್ತದೆ. ಗೆದ್ದ ಮೊದಲ ತಂಡಕ್ಕೆ 49,999 ರೂಪಾಯಿ ಹಾಗೂ ರನ್ನರ್ ತಂಡಕ್ಕೆ 24,999 ರೂಪಾಯಿ ಬಹುಮಾನ ನೀಡಲಾಗುವುದು.

ಟೂರ್ನಿಯಲ್ಲಿ ಭಾಗವಹಿಸುವ ತಂಡಕ್ಕೆ ಹತ್ತುಸಾವಿರ ಪ್ರವೇಶದರವಿರುತ್ತದೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಒಳಪಡುವ ಹನ್ನೆರಡು ಸಂಘಗಳು ಹಾಗೂ ಮಾಧ್ಯಮದ ಮಿತ್ರರು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಹದಿನಾಲ್ಕು ತಂಡಗಳು ಟೂರ್ನಿಯಲ್ಲಿ ಭಾಗಿಯಾಗಲಿದೆ ಎಂದು ಸಂಘದ ಅಧ್ಯಕ್ಷರಾದ ಬಾಬು ಧರ್ಮೇಂದ್ರ ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ದಿನೇಶ್, ಸಂಘದ ಅಧ್ಯಕ್ಷರಾದ ಎಸ್.ಬಾಬು ಧರ್ಮೇಂದ್ರ ಹಾಗೂ ಕಾರ್ಯದರ್ಶಿ ದಿನೇಶ್ ಆಚಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Related