ರಕ್ಕಮ್ಮನ ವಿರುದ್ಧ ಜಾರ್ಜ್ ಶೀಟ್ ಫೈಲ್..!

ರಕ್ಕಮ್ಮನ ವಿರುದ್ಧ ಜಾರ್ಜ್ ಶೀಟ್ ಫೈಲ್..!

ನವದೆಹಲಿ, ಆಗಸ್ಟ್ 17: ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಪೂರಕ ಆರೋಪ ಪಟ್ಟಿಯಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಿದೆ.

200 ಕೋಟಿ ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯದ ಚಾರ್ಜ್ಶೀಟ್ನಲ್ಲಿ ಹೆಸರಿಸಲಾಗಿದೆ. ಭಾರಿ ಮೊತ್ತದ ವಂಚನೆ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆಗಿನ ಅವ್ಯವಹಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಒಂದಾದ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ.

ಈ ಹಿಂದೆ ಜಾಕ್ವೆಲಿನ್ ಫರ್ನಾಂಡಿಸ್ ಹೆಸರಿನಲ್ಲಿ ಇಡಲಾಗಿದ್ದ 7 ಕೋಟಿ ರೂಪಾಯಿ ಫಿಕ್ಸೆಡ್ ಡೆಪಾಸಿಟ್ ಹಣವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿತ್ತು. ಸುಕೇಶ್ ಚಂದ್ರಶೇಖರ್ ಅವ್ಯವಹಾರ ಪ್ರಕರಣದ ತನಿಖೆಯನ್ನು ಇಡಿ ನಡೆಸುತ್ತಿದೆ.

Related