ಮತ್ತೊಂದು ಪವರ್‌ಫುಲ್ ಪಾತ್ರದಲ್ಲಿ ನಟಿ ತಾರಾ

  • In Cinema
  • October 16, 2023
  • 121 Views
ಮತ್ತೊಂದು ಪವರ್‌ಫುಲ್ ಪಾತ್ರದಲ್ಲಿ ನಟಿ ತಾರಾ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಕೆ ವಿಭಿನ್ನ ಚಿತ್ರಗಳು ಮೂಡಿ ಬರುತ್ತಿದ್ದು ರಾಜ ಮಾತ್ರವಲ್ಲದೆ ದೇಶವಿದೇಶಗಳಲ್ಲೂ ನಮ್ಮ ಕನ್ನಡ ಚಿತ್ರರಂಗ ಹೆಸರು ಮಾಡುತ್ತಿದೆ.

ಹೌದು ಇತ್ತೀಚಿಗೆರೆ ತೆರೆಕಂಡ ಕಾಂತರಾ ಚಿತ್ರವು ತನ್ನ ವಿಭಿನ್ನ ಕಥೆಯ ಮೂಲಕ ತೆರೆ ಮೇಲೆ ಅಪ್ಪಳಿಸಿದ್ದು, ಇದು ವಿವಿಧ ಭಾಷೆಗಳಲ್ಲಿ ತೆರೆಕಂಡ ಚಿತ್ರ ಇದಾಗಿದ್ದು ಎಲ್ಲರ ಮನಸ್ಸನ್ನು ಗೆದ್ದಿದೆ.

ಇನ್ನು ನಮ್ಮ ಕನ್ನಡ ಚಿತ್ರರಂಗದಲ್ಲಿ ನಮಗೆ ಗೊತ್ತಿರುವ ಹಾಗೆ ನಟಿ ತಾರಾ ಅವರು ಯಾವ ಪಾತ್ರ ಕೊಟ್ಟರು ನಿರ್ವಹಿಸುವ ಗತ್ತು ಅವರಲ್ಲಿದೆ. ಯಸ್… ಹಿರಿಯ ನಟಿ ತಾರಾ ಅವರು ನಟಿಸಿರುವ ಚುಕ್ಕಿಯ ಮೂಗುತಿ ಚಿತ್ರವು ತೆರೆ ಮೇಲೆ ಅಪ್ಪಳಿಸಲು ಸಜ್ಜಾಗುತ್ತಿದೆ.

ದೇವಿಕಾ ಜನಿತ್ರಿ ನಿರ್ದೇಶನದ ಚಿಕ್ಕಿಯ ಮೂಗುತಿ ಸಿನಿಮಾ ಸದ್ಯ ಟೀಸರ್ ಮೂಲಕ ಅಭಿಮಾನಿಗಳ ಮುಂದೆ  ಬಂದಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ನವ ನಿರ್ದೇಶಕಿಗೆ ಸಾಥ್ ಕೊಟ್ಟಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್ …ಅಪ್ಪು ಹಾಗೂ ಅಶ್ವಿನಿಯವರ ಆತ್ಮೀಯರು ಆಗಿರೋ ದೇವಿಕಾ ನಿರ್ದೇಶದ ಮೊದಲ ಸಿನಿಮಾ ಇದಾಗಿದೆ..ಚಿಕ್ಕಿಯ ಮೂಗುತಿ ಕಾದಂಬರಿ ಆಧಾರಿತ ಸಿನಿಮಾವಾಗಿದ್ದು ವಿಶೇಷ ಎಂದರೆ  ದೇವಕಿ ಜನಿತ್ರಿ ಅವರೇ ಬರೆದಿದ್ದ ಕಾದಂಬರಿಯೇ ಈಗ ಚಿತ್ರವಾಗಿ ಮೂಡಿ ಬರುತ್ತಿದೆ.

‘ಚಿಕ್ಕಿಯ ಮೂಗುತಿ’ ಹೆಸರೇ ಹೇಳುವ ಹಾಗೆ ಇದೊಂದು ಮಹಿಳಾ ಪ್ರಧಾನ ಸಿನಿಮಾ. ಹೆಣ್ಣು ಮಕ್ಕಳ ಹೋರಾಟ, ಶೋಷಣೆ ಬಗ್ಗೆ ಇರುವ ಚಿತ್ರ ಇದಾಗಿದೆ. ಹಿರಿಯ ನಟಿ ತಾರಾ ಅನುರಾಧಾ, ಶ್ವೇತಾ ಶ್ವೀವಾತ್ಸವ್, ಭವಾನಿ ಪ್ರಕಾಶ್, ಅವಿನಾಶ್, ತಬಲ ನಾಣಿ, ರಂಗಾಯಣ ರಘು, ಭರತ್ ಬೋಪಣ್ಣ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತಾರಾ ಅವರು, ಈ ಸಿನಿಮಾದಲ್ಲಿ ಮಹಿಳೆಯರಿಗೆ ಮೀಸಲಾತಿ ಇದೆ. ಎಲ್ಲರೂ ಹೆಣ್ಣು ಮಕ್ಕಳೆ ಸೇರಿಕೊಂಡು ಮಾಡಿರುವ ಸಿನಿಮಾ, ಅದ್ಭತವಾಗಿ ಸಿನಿಮಾ ಮೂಡಿಬಂದಿದೆ ಎಂದು ಹೇಳಿದರು.

 

Related