ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿದ್ದಾರೆ: ಬೊಮ್ಮಾಯಿ

ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿದ್ದಾರೆ: ಬೊಮ್ಮಾಯಿ

ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ.‌ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ಅನ್ಯಾಯಕ್ಕೆ ಸಿದ್ದರಾಮಯ್ಯ ಕಾರಣ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ. ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌. ನಾಚಿಕೆಯಾಗಬೇಕು ಇವರಿಗೆ. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ, ಯುಪಿಎ ಅವಧಿಯಲ್ಲಿ 82 ಸಾವಿರ ಕೋಟಿ ಮಾತ್ರ ಬಂದಿದೆ. ಮೋದಿ ಕಲಾವದಲ್ಲಿ 2.82 ಲಕ್ಷ ಕೋಟಿ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎರಡು ಲಕ್ಷ ಕೋಟಿ ರೂ ಹೆಚ್ಚಿಗೆ ಬಂದಿದೆ. ರಾಜ್ಯಕ್ಕೆ  ಅನ್ಯಾಯ ಮಾಡಿದವರು ಮನಮೋಹನ್ ಸಿಂಗ್ ಮತ್ತು ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದರು.

 

 

Related