ಚುನಾವಣೆ ಮುಗಿದ ನಂತರ ಪ್ರಜ್ವಲ್ ಬೆಂಗಳೂರಿಗೆ ವಾಪಸ್..!?

ಚುನಾವಣೆ ಮುಗಿದ ನಂತರ ಪ್ರಜ್ವಲ್ ಬೆಂಗಳೂರಿಗೆ ವಾಪಸ್..!?

ಬೆಂಗಳೂರು: ಕರ್ನಾಟಕ ರಾಜ್ಯವನ್ನೇ ಬೆಚ್ಚಿ ಬೆಳಿಸುವಂತಹ ಕೃತ್ಯವನ್ನು ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರು ಮಾಡಿದ್ದಾರೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ಅಧಿಕಾರಿಗಳಿಗೆ ಪ್ರಕರಣವನ್ನು ವರ್ಗಾವಣೆ ಮಾಡಿದ್ದು, ಎಸ್ಐಟಿ ಅಧಿಕಾರಿಗಳು ಚುರುಕಿನ ಕಾರ್ಯಚರಣೆಯನ್ನು ಮಾಡುತ್ತಿದ್ದಾರೆ.

ಅಶ್ಲೀಲ ವಿಡಿಯೋ ಚಿತ್ರೀಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮಾಲೆಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳು ಹುಡುಕಾಟವನ್ನು ಮುಂದುವರಿಸಿದ್ದು, ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಮುಗಿದ ನಂತರ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬರುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ತಂದೆ ಹೆಚ್‌ಡಿ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ಹಾಲಿ ಸಂಸದ ಹಾಗೂ ಹಾಸನ  ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಶರಣಾಗಲಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಸಿಎಸ್ ಪುಟ್ಟರಾಜು ಸುಳಿವು ನೀಡಿದ್ದರು. ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲಾಗಿತ್ತು. ಇದೇ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

 

Related