ಜಿಲ್ಲಾಧಿಕಾರಿ ವಿರುದ್ಧ ಸಿಡಿದೆದ್ದ ಸಾ.ರಾ.ಮಹೇಶ್

ಜಿಲ್ಲಾಧಿಕಾರಿ ವಿರುದ್ಧ ಸಿಡಿದೆದ್ದ ಸಾ.ರಾ.ಮಹೇಶ್

ಮೈಸೂರು : ಸರ್ಕಾರವನ್ನೂ ಏಕೆ ದಿಕ್ಕು ತಪ್ಪಿಸುತ್ತಿದ್ದೀರಿ ಸಾವಿನಲ್ಲೂ ಸುಳ್ಳು ಲೆಕ್ಕ ಕೊಟ್ಟಿದ್ದೇಕೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ಶಾಸಕ ಸಾ.ರಾ.ಮಹೇಶ್ ಖಾರವಾಗಿಯೇ ಪ್ರಶ್ನಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಸ್ಥಿತಿ-ಗತಿ, ಸಾವು-ನೋವಿನ ಅಂಕಿ ಅಂಶ ಸಹಿತ ಮೈಸೂರು ಜಿಲ್ಲಾಡಳಿತ ನಿನ್ನೆ ಮಾಹಿತಿ ಬಿಡುಗಡೆ ಮಾಡಿತ್ತು. ಈ ಕುರಿತು ಮರುದಿವನೇ ಅಂದರೆ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಸಾ.ರಾ ಮಹೇಶ್, ರೋಹಿಣಿ ಸಿಂಧೂರಿ ಅವರಿಂದ ಸರ್ಕಾರಕ್ಕೆ ಸುಳ್ಳು ಲೆಕ್ಕ ಕೊಡಲಾಗಿದೆ.

ಮೈಸೂರು ಜಿಲ್ಲೆ ಸೋಂಕಿತರ ಸಂಖ್ಯೆಯಲ್ಲಿ ಮೈಸೂರು ಜಿಲ್ಲೆ ನಂ 1. ಅತಿಹೆಚ್ಚು ಸಾವು ಆಗಿರುವ ಜಿಲ್ಲೆಗಳಲ್ಲೂ ಮೈಸೂರು ನಂ 1. ಆದರೂ ಸುಳ್ಳು ಲೆಕ್ಕ ಕೊಟ್ಟ ಸರ್ಕಾರದ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಇಳಿಸಿದ್ದೇವೆ, ಮೈಸೂರಿನಲ್ಲಿ ನಾನು ಸಾಧನೆ ಮಾಡಿದ್ದೇನೆ ಅಂತ ತೋರಿಸಿಕೊಳ್ಳುತ್ತಿದ್ದಾರೆ. ಟೆಸ್ಟಿಂಗ್ ಕಡಿಮೆ ಮಾಡಿದ ಪರಿಣಾಮ ಕೇಸ್ ಕಡಿಮೆ ಆಗಿದೆ. ಈ ವಿಚಾರವನ್ನು ನಾನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರ ಸೂಚನೆ ಬಳಿಕ 8000 ಟೆಸ್ಟಿಂಗ್ ಶುರುವಾಗಿದೆ.

ನಗರದಲ್ಲಿ ಕೊರೋನಾದಿಂದ ಮೃತಪಟ್ಟಿರುವ ಸಂಖ್ಯೆಯ ದಾಖಲೆ ತೆಗೆಸಿದ್ದೇನೆ. ಇನ್ನು ಜಿಲ್ಲೆಯಲ್ಲಿ ಎಷ್ಟು ಸಾವಿರ ಜನ ಸತ್ತಿದ್ದಾರೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಅದರ ಮಾಹಿತಿಯನ್ನೂ ತರಿಸುತ್ತೇನೆ. ನಿನ್ನೆ ಕೆ.ಆರ್ ನಗರದಲ್ಲಿ ಸಾವು ಝೀರೋ ಅಂತ ಲೆಕ್ಕ ತೋರಿಸಿದ್ದಾರೆ. ಆದರೆ ನನ್ನ ಗಮನಕ್ಕೆ ಬಂದಂತೆ ಚಿಕ್ಕನಾಯಕನಹಳ್ಳಿಯಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ  ಮಾಡಲಾಗಿದೆ.

ಏಕೆ ಸಾವುಗಳನ್ನು ಮುಚ್ಚಿಡುತ್ತಿದ್ದೀರಿ? ಮೃತರ ಕುಟುಂಬಗಳಿಗೆ ಯಾವುದಾದರೂ ರೂಪದಲ್ಲಿ ಸಹಾಯ ಆಗಬೇಕು ನಿಮ್ಮ ಸುಳ್ಳು ಲೆಕ್ಕದಿಂದಾಗಿ ಮೃತರ ಕುಟುಂಬಸ್ಥರಿಗೆ ಮೋಸ ಆಗೋದು ಬೇಡ ಎಂದು ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ ಮಹೇಶ್ ಕಿಡಿಕಾರಿದ್ದರು.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಡಿಸಿ ವಿರುದ್ಧ ಕೂಡಲೇ ತನಿಖೆಗೆ ಆದೇಶ ಮಾಡಬೇಕು ಎಂದು ಶಾಸಕ ಸಾ.ರಾ.ಮಹೇಶ್ ಆಗ್ರಹಿಸಿದರು.

Related