ಕೇಂದ್ರದ ವಿರುದ್ಧ ʼಕೈʼ ರಣಕಹಳೆ

ಕೇಂದ್ರದ ವಿರುದ್ಧ ʼಕೈʼ ರಣಕಹಳೆ

ದೆಹಲಿ: ದೆಹಲಿಯಲ್ಲಿಇಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಪಕ್ಷವು ರಣಕಹಳೆ ಮೊಳಗಿಸಲು ಸಜ್ಜಾಗಿದೆ.

ಈ ಬಾರಿ ಬಜೆಟ್ ಮಂಡನೆಯಲ್ಲಿ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಮಾಡಿದೆ ಎಂದು ಸಾಲು ಸಾಲು ಪ್ರತಿಭಟನೆ ಮಾಡಲು ಕೈ ಪಡೆ ಮುಂದಾಗಿದೆ.

ಇಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಸುಮಾರು 10:30 ಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿಗೆ ರಾಜ್ಯಕ್ಕೆ ರಾಜ್ಯವೇ ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಕಂಡು ಬಂದಿದೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಸಚಿವರು ಶಾಸಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಬೆಳಿಗ್ಗೆ 10.30 ರಿಂದ ಪ್ರಾರಂಭವಾಗಿ ಸುಮಾರು ಮಧ್ಯಾಹ್ನ 1 ಗಂಟೆಯವರೆಗೂ ನಡೆಯಲಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಈಗಾಗಲೇ ಇದರ ಬಗ್ಗೆ ವಿವರಣೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ನಡೆಸುತ್ತಿರುವುದನ್ನು ಖಂಡಿಸಿ ನಾವು ಹೋರಾಟ ಮಾಡದೆ ಹೋದರೆ ನಮ್ಮ ಕರ್ನಾಟಕಕ್ಕೆ ಅನ್ಯಾಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಫೆಬ್ರುವರಿ 6 ರಂದು ಹೇಳಿದ್ದಾರೆ.

Related