1ರಿಂದ 8ರವರೆಗೆ ಎಲ್ಲಾ ಮಕ್ಕಳು ಪರೀಕ್ಷೆ ಪಾಸ್

1ರಿಂದ 8ರವರೆಗೆ ಎಲ್ಲಾ ಮಕ್ಕಳು ಪರೀಕ್ಷೆ ಪಾಸ್

ಬೆಂಗಳೂರು, ಏ. 2 : ಕೋವಿಡ್-19 ಕಾರಣದಿಂದ ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ಧಾರೆ.
ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಈ ಹಿಂದೆ ಒಂದರಿಂದ ಆರನೇ ತರಗತಿಯವರೆಗೆ ಮಕ್ಕಳನ್ನು ಪಾಸ್ ಮಾಡಲು ಸೂಚಿಸಲಾಗಿತ್ತು. ಆದರೆ ಈಗ ಏಳು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳನ್ನು ಕೂಡಾ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣ ಮಾಡಲಾಗುವುದು ಎಂದು ಸ್ಪಷ್ಟ ಪಡಿಸಿದರು.
ಈ ವರ್ಷ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸಲು ಇಚ್ಛಿಸಲಾಗಿತ್ತು. ಕೋವಿಡ್-19 ಕಳವಳದ ಸಂದರ್ಭದಲ್ಲಿ ಇದು ನಡೆಸಲು ಸಾಧ್ಯವಿಲ್ಲ. ಕಾರಣದಿಂದ ಎಂಟನೇ ತರಗತಿ ಪ್ರಾರಂಭದಲ್ಲಿ ಮೌಲ್ಯಾಂಕನ ನಡೆಸಲಾಗುವುದು ಎಂದರು.
ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿದ್ಯಾರ್ಥಿಗಳಿಗೆ ಫಾರ್ಮೇಟೀವ್ (ರೂಪಣಾತ್ಮಕ), ಸಮ್ಮೇಟೀವ್( ಸಂಕಲನಾತ್ಮಕ) ಪರೀಕ್ಷೆಗಳನ್ನು ನಡೆಸಲಾಗಿದ್ದು, 10ನೇ ತರಗತಿಗೆ ಪಾಸ್ ಮಾಡಲಾಗುತ್ತದೆ.

Related