ದೇಶದೆಲ್ಲೆಡೆ ಕಾಂಗ್ರೆಸ್-ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಕೆಶಿ

ದೇಶದೆಲ್ಲೆಡೆ ಕಾಂಗ್ರೆಸ್-ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಕೆಶಿ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ನಮ್ಮೆಲ್ಲರಿಗೂ ವಿಶ್ವಾಸ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ.

ಇದ್ದನೂ ಓದಿ: ಬುಲ್ಡೋಜರ್‌ಗಳನ್ನು ಎಲ್ಲಿ ಓಡಿಸಬೇಕೆಂದು ಆದಿತ್ಯನಾಥ್ ಬಳಿ ಟ್ಯೂಷನ್ ಪಡೆಯಿರಿ: ನಮೋ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಮಳೆ ಪರಿಣಾಮ ಕುರಿತು ಪ್ರತ್ಯೇಕ ಸಭೆ ಮಾಡುತ್ತೇನೆ. ಬತ್ತಿ ಹೋಗಿರುವ ಕೆರೆಗಳಿಗೆ ಪರಿಷ್ಕರಿಸಿದ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

Related