ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ: ಡಿಸಿಎಂ

ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ: ಡಿಸಿಎಂ

ಚನ್ನಪಟ್ಟಣ: ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಈಗಾಗಲೇ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು

ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಶೀಘ್ರದಲ್ಲೇ ಜನರ ಜನರ ಸಮಸ್ಯೆ ಬಗೆಹರಿಸುತ್ತೇವೆ: ಡಿಕೆಶಿ

ಕುಮಾರಸ್ವಾಮಿ ಅವರು ಮಂಡ್ಯದಲ್ಲೂ ಜನಸಂಪರ್ಕ ಸಭೆ ನಡೆಸುತ್ತಿದ್ದಾರೆ ನಿಮನ್ನು ನೋಡಿ ನಕಲು ಮಾಡುತ್ತಿದ್ದಾರೆಯೇ ಮಾಡಲಿ, ಒಳ್ಳೆಯ ಕೆಲಸ ಯಾರು ಮಾಡಿದರೆ ಏನಂತೆ. ಜನಸೇವೆ ಮಾಡುವುದನ್ನು ನಾನು ಬೇಡ ಎಂದು ಹೇಳಲು ಆಗುತ್ತದೆಯೇ? ಎಂದರು.

ನಿವೇಶನ ಹಂಚಲು ಗಡುವು ಏನಾದರೂ ನೀಡಿದರೆ ಮೊದಲು ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುವುದು. ಅರ್ಹರನ್ನು ಗುರುತಿಸಲಾಗುವುದು. ನಂತರ ನಾನೇ ಖುದ್ದಾಗಿ ಬಂದು ಸರ್ಕಾರಿ ಜಮೀನು, ಖಾಸಗಿ ಜಮೀನು ಪರಿಶೀಲನೆ ನಡೆಸಿ ಹಂಚಿಕೆ ಮಾಡಲಾಗುವುದು. ಇಲಾಖಾವಾರು ಅರ್ಜಿಗಳನ್ನು ವಿಂಗಡಣೆ ಮಾಡಿ ಆಯಾಯ ಇಲಾಖೆಯ ಸಚಿವರಿಂದ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

 

Related