ಡಿಕೆಶಿ​ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರೇ: ಕುಮಾರಸ್ವಾಮಿ

ಡಿಕೆಶಿ​ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರೇ: ಕುಮಾರಸ್ವಾಮಿ

ಮೈಸೂರು: ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ಇಡೀ ದೇಶದಾದ್ಯಂತ ಸುದ್ದಿಯಾಗಿದ್ದು ಇದರ ಹಿಂದೆ ಯಾರ್ಯಾರಿದ್ದಾರೆ, ಪೆನ್ ಡ್ರೈವ್ಗಳನ್ನು ಹಂಚಿದ್ದುಯಾರು? ಇದರ ಬಗ್ಗೆ ರಾಜ್ಯ ಸರ್ಕಾರ ತನಿಖೆ ಮಾಡಬೇಕು ಇಲ್ಲದಿದ್ದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ ಪೆನ್​ಡ್ರೈವ್ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನವಾಗಿದೆ. ಪೊಲೀಸರ ರಕ್ಷಣೆಯಲ್ಲಿ ಎಂಟು ಜನ ಸೇರಿದಂತೆ ಕಾರ್ತಿಕ್ ಸಹ ಇದ್ದಾನೆ? ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ನ್ಯಾಯಾಲಯಕ್ಕೆ ಹಾಜರು ಪಡಿಸಿಲ್ಲ ಹೇಳಿ? ಕುಮಾರಸ್ವಾಮಿ ಪ್ರಶ್ನಿಸಿದರು.  ಇದನ್ನೂ ಓದಿ: ಆರ್‌ಸಿಬಿ ತಂಡಕ್ಕೆ ಆಲ್ ದ ಬೆಸ್ಟ್ ಹೇಳಿದ ವಿಜಯ್ ಮಲ್ಯ

ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೆ ಎಂದು ವಾಗ್ದಾಳಿ ಮಾಡಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರೇ, ಬಹಳಷ್ಟು ಭಯೋತ್ಪಾದಕರು ಅವರ ಸುತ್ತಮುತ್ತ ಇದ್ದಾರೆ. ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಅಂತಾ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ? ವಿಡಿಯೋ ಮಾಡಿರುವುದು ಒಂದು ಭಾಗ. ವಿಡಿಯೋವನ್ನು ಚುನಾವಣೆಗಾಗಿ ವಿತರಿಸಿದ್ದು ಅಪರಾಧ ಅಲ್ವಾ? ವಿಡಿಯೋ ಮಾಡಿದ್ದಕ್ಕಿಂತ ಅದನ್ನು ಹಂಚಿದ್ದು ಹೆಚ್ಚು ಅಪರಾಧ ಅಲ್ವಾ? ಎಂದು ಪ್ರಶ್ನಿಸಿದರು.

 

Related