ಅಂಬೇಡ್ಕರ್ ಭವನ ಲೋಕಾರ್ಪಣೆ

ಅಂಬೇಡ್ಕರ್ ಭವನ ಲೋಕಾರ್ಪಣೆ

ಬೆಂಗಳೂರು: ಡಾ ಬಿ ಆರ್ ಅಂಬೇಡ್ಕರ್ ಅವರ 133 ನೆಯ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತ ಎಂ ಸತೀಶ್ ರೆಡ್ಡಿ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರು, ಎಚ್ಎಸ್ಆರ್ ಲೇಔಟ್ ನಲ್ಲಿರುವ ಪರಂಗಿಪಾಳ್ಯದಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದರು.

ಇನ್ನು ಶಾಸಕ ಸತೀಶ್ ರೆಡ್ಡಿ ಮತ್ತು ತೇಜಸ್ವಿ ಸೂರ್ಯ ಅವರು ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಂಬೇಡ್ಕರ್ ಭವನವನ್ನು ಲೋಕಾರ್ಪಣೆ ಮಾಡಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಮಾಜಿ ಕಾರ್ಪೊರೇಟರ್ ರಾಣಿ ಶ್ರೀನಿವಾಸ್, ಗುರುಮೂರ್ತಿ ರೆಡ್ಡಿ, ರಮೇಶ್ ಸೇರಿದಂತೆ ಬಿಜೆಪಿಯ ಹಲವು ಕಾರ್ಯಕರ್ತರು ಮತ್ತು ಸಾವಿರಾರು ಜನ ಗಣ್ಯರು ಭಾಗಿಯಾಗಿದ್ದರು.

 

 

Related