ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ

ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ

ಬೆಂಗಳೂರು: ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನವಾಗಿದ್ದು, ಅಂಬರೀಷ್ ಅವರ ಸಮಾಧಿಗೆ ಅಭಿಷೇಕ್ ಅಂಬರೀಷ್ ಹಾಗೂ ಅವಿವ ಅವರು ಆಮಂತ್ರಣ ಪತ್ರ ಇಟ್ಟು ಪೂಜೆ ಸಲ್ಲಿಕೆ ಮಾಡಲಾಗಿದೆ.

ಹೌದು, ಸ್ಯಾಂಡಲ್‌ವುಡ್ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಮದುವೆಗೆ ದಿನಗಣನೆ ಶುರುವಾಗಿದೆ. ಚಂದನವನದಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರೋದಕ್ಕೆ ಸಜ್ಜಾಗಿದೆ.

ಅಭಿಷೇಕ್ ಅಂಬರೀಶ್, ಮಾಡೆಲ್ ಅವಿವ ಬಿಡಪ ಮದುವೆಗೆ ಮುಹೂರ್ತ ನಿಗದಿ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ.

2022ರ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಈಗ ಮದುವೆಗೆ ಸಿದ್ಧತೆ ನಡೆಯುತ್ತಿದೆ.

 

Related