ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ

ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಅಮಿತ್ ಶಾ ಕರ್ನಾಟಕ ರಾಜ್ಯಕ್ಕೆ ಎಂಟ್ರಿ ನೀಡಿದ್ದಲಿದ್ದು, ಈ ಬಾರಿ ಕರ್ನಾಟಕದಲ್ಲಿ ಸುಮಾರು 28 ಕ್ಷೇತ್ರಕ್ಕೆ 28 ಕ್ಷೇತ್ರವನ್ನು ಗೆಲ್ಲಬೇಕೆಂಬ ಹೊಣೆಯನ್ನು ಹೊತ್ತಿರುವ ಬಿಜೆಪಿ ಪಕ್ಷಕ್ಕೆ ಬಲ ತುಂಬಲು ರಾಷ್ಟ್ರ ನಾಯಕ ಇಂದು ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈಗಾಗಲೇ ರಾಜಕೀಯದಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ  ಪ್ರಚಾರ ಪ್ರಾರಂಭವಾಗಿದ್ದು ಎಲ್ಲಾ ಅಭ್ಯರ್ಥಿಗಳು ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ಇನ್ನು ಬಿಜೆಪಿ ಪಕ್ಷಕ್ಕೆ ಬೆಲೆ ತುಂಬಲೆಂದು ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ.

ಡಿಕೆ ಸಹೋದರರ ಕೋಟೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ. ಹಳೆ ಮೈಸೂರು ಭಾಗವನ್ನೇ ಅಮಿತ್ ಶಾ ಗುರಿಯಾಗಿಸಿಕೊಂಡಿದ್ದಾರೆ. ಇಂದು ಸಂಜೆ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ನ ಮಂಜುನಾಥ್ ಪರ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಚನ್ನಪಟ್ಟಣದಿಂದಲೇ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.

 

Related