ಬಚ್ಚನ್ ಮನೆ ಜಲ್ಸಾ ಸೀಲ್ ಡೌನ್

ಬಚ್ಚನ್ ಮನೆ ಜಲ್ಸಾ ಸೀಲ್ ಡೌನ್

ಮುಂಬೈ : ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ತಂದೆ – ಮಗನಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಅಮಿತಾಭ್ ಬಚ್ಚನ್ ಅವರ ನಿವಾಸ ಅಧಿಕಾರಿಗಳು ಸೀಲ್ಡೌನ್ ಮಾಡಿದ್ದಾರೆ.
ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿ, “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ ಪರೀಕ್ಷೆ ನಡೆಯುತ್ತಿದೆ. ಅದರ ಫಲಿತಾಂಶ ಬರಬೇಕಿದೆ. ಈ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಅಭಿಷೇಕ್ ಬಚ್ಚನ್ ತಮಗೂ ಕೊರೋನಾ ವೈರಸ್ ಇರುವ ವಿಚಾರವನ್ನು ಒಪ್ಪಿಕೊಂಡಿದ್ದರು.
ಕೊರೋನಾ ಪರೀಕ್ಷೆ ವೇಳೆ ಐಶ್ವರ್ಯಾ ರೈ ಬಚ್ಚನ್, ಆರಾಧ್ಯಾ ಬಚ್ಚನ್ ಹಾಗೂ ಜಯಾ ಬಚ್ಚನ್ಗೆ ಕೊರೋನಾ ನೆಗೆಟಿವ್ ಬಂದಿದೆ. ಅಮಿತಾಬ್ ಬಚ್ಚನ್ ಮನೆ ಜಲ್ಸಾ ಹಾಗೂ ಜನಕ್ ಅನ್ನು ಅಧಿಕಾರಿಗಳು ಸೀಲ್ಡೌನ್ ಮಾಡಿದ್ದಾರೆ, ಅಮಿತಾಭ್ ಇರುವ ಮನೆ ಭಾಗವನ್ನು ಕಂಟೆನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

Related