ತ್ಯಾಗ ಬಲಿದಾನಗಳ ಸ್ಮರಣೆಯೇ ಅಮೃತ ಮಹೋತ್ಸವ..

ತ್ಯಾಗ ಬಲಿದಾನಗಳ ಸ್ಮರಣೆಯೇ ಅಮೃತ ಮಹೋತ್ಸವ..

ಬೆಂಗಳೂರು : ಭಾರತದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನರ ತ್ಯಾಗ, ಬಲಿದಾನಗಳು ನಡೆದಿವೆ. ಆ ತ್ಯಾಗ, ಬಲಿದಾನ ಮಾಡಿರುವ ಮಹನೀಯರನ್ನು ನೆನೆಯಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಗೆ ಕರೆ ನೀಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ನಾರಾಯಣ ಹೇಳಿದರು.

ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯುನ್ಮಾನ ಮಾಧ್ಯಮ ವಿಭಾಗ ಮತ್ತು ದಿಶಾ ಭಾರತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 75 ವರ್ಷಗಳಲ್ಲಿ ಭಾರತವು ವಿವಿಧತೆಯಲ್ಲಿ ಏಕತೆ ಸಾಧಿಸಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ಇದೊಂದು ಅಮೃತ ಕಾಲ ಎಂದು ಘೋಷಿಸಿದ್ದಾರೆ ಎಂದರು.

ನಮ್ಮ ರಾಜ್ಯದಲ್ಲಿ ಆರೂವರೆ ಕೋಟಿ ಜನಸಂಖ್ಯೆ ಇದ್ದರೂ, ಗುಣಮಟ್ಟದ ಶಿಕ್ಷಣದ ಕೊರತೆಯಿಂದಾಗಿ ಟ್ಯಾಲೆಂಟ್ಗೂ ಕೊರತೆ ಉಂಟಾಗಿದೆ. ತರಗತಿಯ ಕಲಿಕೆಯಿಂದ ಹೊರಬಂದರೆ ಮಾತ್ರ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ಎನ್ಇಪಿ ಜಾರಿಗೆ ತರಲಾಗಿದೆ. ಈ ನಾಡಿನಲ್ಲಿ ಪ್ರತಿಯೊಬ್ಬ ಯುವಕರೂ ಕೌಶಲ ಹೊಂದಬೇಕು. ಆ ಮೂಲಕ ಪ್ರತಿಯೊಬ್ಬರೂ ಉದ್ಯೋಗ ಪಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Related