ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಮೃತಮತಿ

ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಮೃತಮತಿ

ಬೆಂಗಳೂರು : ಕೊರೋನಾ ಬಿಕ್ಕಟ್ಟಿನ ನಡುವೆಯೂ ಕನ್ನಡ ಸಿನಿಮಾಗಳ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡ್ತಿವೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಸಿನಿಮಾ ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದ್ದಾರೆ.

ಕನ್ನಡದ ಖ್ಯಾತ ಕವಿ ಜನ್ನ ರಚಿಸಿದ ಯಶೋಧರ ಚರಿತೆಯನ್ನ ಆಧರಿಸಿ ನಿರ್ಮಾಣವಾಗಿರೋ ಈ ಚಿತ್ರದಲ್ಲಿ ಹರಿಪ್ರಿಯ ಅಮೃತಮತಿ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಕೆಲ ದಿನಗಳ ಹಿಂದೆ ನೋಯ್ಡಾ ವಿಶ್ವ ಚಿತ್ರೋತ್ಸವದಲ್ಲಿ ಹರಿಪ್ರಿಯ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದರು. ಇದೀಗ ಅಮೃತಮತಿ ಸಿನಿಮಾ ಆಸ್ಟ್ರಿಯಾ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೊದಲಿಗೆ ಆನ್‌ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದೆ. ಜುಲೈ 22 ರಿಂದ ಆಗಸ್ಟ್ 5ರವರೆಗೆ ಚಿತ್ರೋತ್ಸವ ನಡೆಯಲಿದೆ. ಆನ್‌ಲೈನ್‌ನಲ್ಲಿ ಪ್ರದರ್ಶನಗೊಂಡ ಸಿನಿಮಾಗಳು ಸ್ಫರ್ಧೆಯಲ್ಲಿ ಇರಲಿವೆ. ಕೊನೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಕೊರೊನಾ ಹಾವಳಿಯಿಂದ ಸಿನಿಮಾ ಶೂಟಿಂಗ್, ಪ್ರದರ್ಶನ ನಿಂತಿದ್ರು, ಅಮೃತಮತಿ ಸಿನಿಮಾ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿ ಚಿತ್ರರಂಗಕ್ಕೆ ಗೌರವ ತಂದುಕೊಟ್ಟಿದೆ.

Related