ಲೋಕಸಮರಕ್ಕೆ ಮೈತ್ರಿಯ ಮಹತ್ವದ ಸಭೆ

ಲೋಕಸಮರಕ್ಕೆ ಮೈತ್ರಿಯ ಮಹತ್ವದ ಸಭೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ನಿನ್ನೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು ಇಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಈ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂದು ಮಹತ್ವದ ಸಭೆಯನ್ನು ಕೈಗೊಂಡಿದ್ದಾರೆ.

ನಿನ್ನೆಯಿಂದ ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಣ ರಂಗೆರಿದ್ದು, ಇಂದು ಮೈತ್ರಿ ನಾಯಕರುಗಳು ಮಹತ್ವದ ಸಭೆಯನ್ನು ಮಾಡಿ ಚುನಾವಣೆ ಸಂದರ್ಭದಲ್ಲಿ ಯಾವ ರೀತಿ ಕೆಲಸ ಮಾಡಬೇಕೆಂದು ತೀರ್ಮಾನ ಕೈಗೊಳ್ಳಲಾಗುತ್ತೆ ಎಂದು ತಿಳಿದುಬಂದಿದೆ.

ಇನ್ನು ಬೆಳಗ್ಗೆ 11.30 ಕ್ಕೆ ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಭೆಯಾಗಿದ್ದುಈ ಸಭೆಯಲ್ಲಿ ಭಾಗಿಯಾಗಲಿರುವ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ, ಜೆಡಿಎಸ್ ರಾಜ್ಯಾದ್ಯಕ್ಷ ಮಾಜಿ ಸಿಎಂ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

 

Related