“ಕರಗ ಮಹೋತ್ಸವ”ಆಚರಣೆ ಕುರಿತು ಮಹತ್ವದ ಸಭೆ

“ಕರಗ ಮಹೋತ್ಸವ”ಆಚರಣೆ ಕುರಿತು ಮಹತ್ವದ ಸಭೆ

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು “ಕರಗ ಮಹೋತ್ಸವ” ಕುರಿತು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಪಾಲಿಕೆ ಕೇಂದ್ರ ಕಛೇರಿಯ ರಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು. ಕರಗ ಶಕ್ತ್ಯೋತ್ಸವವು ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳುವುದು.

ಕರಗ ಉತ್ಸವ ನಡೆಯುವ ಬೀದಿಗಳಲ್ಲಿ ದೀಪಗಳ ಅಳವಡಿಕೆ ವ್ಯವಸ್ಥೆ ಕೈಗೊಳ್ಳುವುದು. ಪಾಲಿಕೆಯ ಆರೋಗ್ಯ ಇಲಾಖೆ ವತಿಯಿಂದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿಯೋಜನೆ ಮಾಡುವುದು. ಸ್ವಚ್ಛತಾ ನಿರ್ವಹಣೆತ ದೃಷ್ಠಿಯಿಂಧ ಘನತ್ಯಾಜ್ಯ ವಿಭಾಗದ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜಿಸುವುದು.

ಭಕ್ತಾದಿಗಳು ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡುವುದು. ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಅಗತ್ಯ ಕ್ರಮ ವಹಿಸುವುದು.

ಸಂಚಾರ ದಟ್ಟಣೆಯಾಗದಂತೆ ಮಾರ್ಗ ಬದಾಲವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸುವುದು. ಕರಗ ಮಹೋತ್ಸವ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳ ಅಳವಡಿಕೆ.

ಕರಗ ಶಕ್ತ್ಯೋತ್ಸವ ಕಾರ್ಯಕ್ರಮಗಳಲ್ಲಿ ಬೆಂಕಿಯಿಂದ ಅವಘಡಗಳು ಸಂಭವಿಸದಂತೆ ಅಗ್ನಿ ಶಾಮಕ ವ್ಯವಸ್ಥೆಯನ್ನು ಕೈಗೊಳ್ಳುವುದು. ಭಕ್ತಾದಿಗಳು ಹಾಗೂ ಸಾರ್ವಜನಿಕರ ಭದ್ರತೆಯ ಹಿತದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವುದು.

ಈ ವೇಳೆ ವಲಯ ಆಯುಕ್ತರುಗಳಾದ ಡಾ. ದೀಪಕ್.ಆರ್.ಎಲ್, ವಿನೋತ್ ಪ್ರಿಯಾ, ಸ್ನೇಹಲ್, ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ದಯಾನಂದ್, ಮುಜರಾಯಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related