ಆನೇಕಲ್: ನೆಲಕ್ಕುರುಳಿದ 120 ಅಡಿ ಎತ್ತರದ ತೇರು

ಆನೇಕಲ್: ನೆಲಕ್ಕುರುಳಿದ 120 ಅಡಿ ಎತ್ತರದ ತೇರು

ಬೆಂಗಳೂರು: ನೂರಾರು ವರ್ಷ ಇತಿಹಾಸವುಳ್ಳ ಹುಸ್ಕೂರು ಮದ್ದೂರಮ್ಮ ಜಾತ್ರೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಡೆಯುತ್ತಿದ್ದು, ಜಾತ್ರೆ ಸಂದರ್ಭದಲ್ಲಿ ಎಳೆಯುತ್ತಿರುವ ಸುಮಾರು 120 ಅಡಿ ಎತ್ತರದ ತೇರು ಆಯ ತಪ್ಪಿ ನೆಲಕ್ಕುರುಳಿದ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿಇಂದು ಶನಿವಾರ ಏಪ್ರಿಲ್ 6 ರಂದು ಜಾತ್ರೆ ನೋಡಲೆಂದು ಸುತ್ತಮುತ್ತಲಿನ ಗ್ರಾಮದಿಂದ ಸಾವಿರಾರು ಭಕ್ತರು ಆಗಮಿಸಿದ್ದು ಸಂದರ್ಭದಲ್ಲಿ ಏಕಏಕಿ ತೇರು ನೆಲಕ್ಕುರುಳಿದ.

ಮದ್ದೂರಮ್ಮ ಜಾತ್ರೆಗೆ ಎತ್ತುಗಳು, ಟ್ರ್ಯಾಕ್ಟರ್​ಗಳ ಮೂಲಕ ತೇರು ಎಳೆದುಕೊಂಡು ಬರಲಾಗುತ್ತದೆ. ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ತೇರು ಬರುತ್ತಿರುವಾಗ ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ..

Related