ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಆನೇಕಲ್ : ಬನ್ನೇರುಘಟ್ಟ ಗ್ರಾಮದ ಸಮೀಪದಲ್ಲಿಯೇ ಬೆಳಂ ಬೆಳಗ್ಗೆ 7 ಗಂಟೆ ಸುಮಾರಿಗೆ ಬೃಹತ್ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾಗಿದೆ.

ಗ್ರಾಮದ ಸಮೀಪದಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆಂದು ಹೊರಗಡೆ ಓಡಾಡುತ್ತಿದ್ದ ಸಂದರ್ಭದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಜನರು ಭಯ ಭೀತರಾಗಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರು.

ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಹೆಬ್ಬಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಸುಮಾರು 8 ಅಡಿ ಉದ್ದದ ಹೆಬ್ಬಾವನ್ನು ನೋಡಲು ಜನ ಗುಂಪು ಗುಂಪಾಗಿ ಸೇರಿದ್ದರು. ಅರಣ್ಯ ಅಧಿಕಾರಿಗಳು ಹಾವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬಿಡಲಾಗಿದೆ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Related