ಅನ್ನಭಾಗ್ಯ ಜಾರಿ ಶತಸಿದ್ಧ: ಸಿಎಂ

ಅನ್ನಭಾಗ್ಯ ಜಾರಿ ಶತಸಿದ್ಧ: ಸಿಎಂ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿದರಿಂದ, ಕೇಂದ್ರದಿಂದ ಎಷ್ಟೇ ಆಕ್ರೋಶ ಬಂದರೂ ಸಹ ನಾವು ನಮ್ಮ ರಾಜ್ಯದ ಜನರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರು ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 1ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದೆ. ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸುವುದಕ್ಕೆ ನಾವು ಸಿದ್ಧರಿದ್ದೇವೆ. ಕೇಂದ್ರ ಸರಕಾರ ಬಡವರಿಗೆ ಅಕ್ಕಿ ಕೊಡುವ ವಿಚಾರದಲ್ಲೂ ರಾಜಕಾರಣ ಹಾಗೂದ್ವೇಷ ಮಾಡುತ್ತಿದೆ. ಕೇಂದ್ರ ಸರಕಾರವೇನೂ ಭತ್ತ ಬೆಳೆಯಲು ಜಮೀನು ಇಟ್ಟುಕೊಂಡಿಲ್ಲ. ಅವರೂ ರಾಜ್ಯಗಳಿಂದಲೇ ಅಕ್ಕಿಯನ್ನು ಪಡೆದಿದ್ಧಾರೆಂದು ಆಕ್ರೋಶ ವ್ಯಕ್ತಪಡಿಸಿದರು.

 

Related