ಅನ್ನಭಾಗ್ಯ ಯೋಜನೆ: ಅನ್ಯ ರಾಜ್ಯಗಳ ಮೊರೆ ಹೋದ ಸಿಎಂ

ಅನ್ನಭಾಗ್ಯ ಯೋಜನೆ: ಅನ್ಯ ರಾಜ್ಯಗಳ ಮೊರೆ ಹೋದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಜುಲೈ ಒಂದನೇ ತಾರೀಖಿನಿಂದ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಎಲ್ಲ ತರಹದ ಸಿದ್ಧತೆಗಳನ್ನು ಮಾಡಿಕೊಂಡಿತ್ತು ಆದರೆ ಕೇಂದ್ರ ಸರ್ಕಾರ ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆ ರಾಜ್ಯಗಳಿಗೆ ಅಕ್ಕಿ ಸಹಾಯವನ್ನು ಪಡೆಯಲು ನಿರ್ಧರಿಸಿದ್ದಾರೆ.

ಹೌದು, ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಹೀಗಾಗಿ ಜುಲೈ 1ರಂದು ಈ ಯೋಜನೆ ಜಾರಿಯಾಗುವುದು ಬಹುತೇಕ ಡೌಟ್ ಆಗಿದ್ದು ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಅಕ್ಕ ಪಕ್ಕದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಜೊತೆ ಅಕ್ಕಿ ಖರೀದಿಗೆ ಮಾತುಕತೆ ನಡೆಸಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ.

ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ಅಕ್ಕಿಯ ದರ ಹಾಗೂ ಎಕ್ಸಸ್, ಟ್ರಾನ್ಸ್ ಪೋರ್ಟ್ ಚಾರ್ಜ್ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಅಕ್ಕಿ ಲಭ್ಯತೆಯ ಬಗ್ಗೆ ಆಹಾರ ಇಲಾಖೆ ಸರ್ಕಾರಕ್ಕೆ ಪ್ರಾಥಮಿಕ ಮಾಹಿತಿ ನೀಡಿದೆ.

Related