ರಾಜಧಾನಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ: ಸಿಎಂ ಭಾಗಿ

ರಾಜಧಾನಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ: ಸಿಎಂ ಭಾಗಿ

ಬೆಂಗಳೂರು: ಇಂದು (ಜನವರಿ 16) ರಂದು ಬೆಂಗಳೂರು ನಗರದಲ್ಲಿ ನಡೆದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಕಚೇರಿಯಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಗೃಹ ಸಚಿವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಪಾಲ್ಗೊಂಡಿದ್ದರು.

ಇನ್ನು ಈ ಸಮಾವೇಶದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಮುಖ್ಯಮಂತ್ರಿ ಪರಿಶೀಲಿಸಿದರು.

ಬಳಿಕ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್  ತಂತ್ರಾಂಶಗಳನ್ನು ಬಿಡುಗಡೆ ಮಾಡಿ, ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

Related