ಮತ್ತೊಂದು ದಸರಾ ಆನೆ ಸಾವು

  • In State
  • June 11, 2024
  • 111 Views
ಮತ್ತೊಂದು ದಸರಾ ಆನೆ ಸಾವು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್ ತಗಲಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದ ಆನೆಯೂ ಮೈಸೂರಿನಲ್ಲಿ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ  ಇಂದು ಜೂ(ನ್‌ 11 ಮಂಗಳವಾರ) ರಂದು ಮೃತಪಟ್ಟಿದೆ. ಇದನ್ನೂ ಓದಿ: ದರ್ಶನ್​ಗೆ ಶಿಕ್ಷೆಯಾಗಬೇಕು; ಭಾವನಾ ಬೆಳಗೆರೆ

ಅರಣ್ಯ ಇಲಾಖೆ ಮೂಲಗಳ ಪ್ರಕಾರ ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಆನೆಯು ಆಹಾರ ಅರಸಿ ಕಾಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ‌ ಹೇಳಲಾಗಿದೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಈ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌ 2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು.

 

Related