ನಟಿ ಗಲ್ರಾನಿಗೆ ಮತ್ತೊಂದು ಸಂಕಷ್ಟ

ನಟಿ ಗಲ್ರಾನಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು : ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಜನಾ ಮತ್ತೊಬ್ಬ ಆಪ್ತ ಜೊಯೇಬ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದರು.

ಈತ ಡ್ರಗ್ ಪೆಡ್ಲರ್ ಆಗಿದ್ದು, ಸಂಜನಾಗೆ ಡ್ರಗ್ ಸಪ್ಲೈ ಮಾಡ್ತಿದ್ದ ಎನ್ನಲಾಗಿದೆ. ಈತನಿಂದ ನಟಿಯ ಬಗ್ಗೆ ಮತ್ತಷ್ಟು ವಿಚಾರಗಳು ಹೊರಬರುವ ಸಾಧ್ಯತೆಯಿದೆ. ಹೀಗಾಗಿ ಸಂಜನಾ ವಿರುದ್ಧ ಸಿಸಿಬಿ ಪೊಲೀಸರಿಗೆ ಮತ್ತಷ್ಟು ಸಿಗಬಹುದು. ಇದು ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ. ಸಂಜನಾ ಹೊರತಾಗಿ ಮತ್ತಷ್ಟು ಸೆಲೆಬ್ರಿಟಿಗಳ ಹೆಸರು ಈತನಿಂದ ಹೊರಬರುವ ಸಾಧ್ಯತೆಯೂ ಇಲ್ಲದಿಲ್ಲ.

Related