ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಮತ್ತೊಂದು ಕೊಲೆ

ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಮತ್ತೊಂದು ಕೊಲೆ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಇತ್ತೀಚಿಗಷ್ಟೇ ನೇಹಾ ಹಿರೇಮಠ್ ಎಂಬ ಯುವತಿಯನ್ನು ಪ್ರೀತಿ ನಿರಾಕರಿಸಿದ್ದ ಕಾರಣಕ್ಕೆ ಫಯಾಜ್ ಎಂಬ ಯುವಕನು ಚಾಕುವಿನಿಂದ ಸುಮಾರು 9 ಬಾರಿ ಚುಚ್ಚಿ ನೇಹಾ ಹಿರೇಮಠ ಎಂಬುವ ಯುವತಿಯನ್ನು ಕೊಲೆ ಮಾಡಿರುವ ಘಟನೆ ಇನ್ನು ರಾಜ್ಯದಲ್ಲಿ ಮಾಸಿಲ್ಲ. ಇದರ ಬೆನ್ನೆಲ್ಲೇ ಮತ್ತೆ ಈಗಗ ಪ್ರೀತಿ ನಿರಾಕರಿಸಿದ್ದಕ್ಕೆ ಮಲಗಿದ್ದ ಜಾಗದಲ್ಲೇ ಯುವತಿಯನ್ನುಚುಚ್ಚಿ ಕೊಲೆ ಮಾಡಿರುವ ಘಟನೆ ಎಂದು ಬೆಳಕಿಗೆ ಬಂದಿದೆ

ಹೌದು, ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಯುವತಿಯನ್ನು ಹತ್ಯೆ ಮಾಡಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ.

ಗಿರೀಶ್ ಅಂಜಲಿಯನ್ನು ಮನಸಾರೆ ಪ್ರೀತಿಸುತ್ತಿದ್ದ. ಆದರೆ ಆಕೆ ಅವನ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕ್ರೋಧಗೊಂಡ ಆತ ನೇಹಾ ಪಾಟೀಲ್ ಮಾದರಿಯಲ್ಲಿ ನಿನ್ನನ್ನೂ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಕೆಲ ದಿನಗಳ ಹಿಂದೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆ ಇಂದು ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿರುವ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು. ಇದೀಗ ಕೊಲೆಯೇ ನಡೆದಿದೆ.

 

Related