ಎಸ್ಐಟಿ ತಂಡಕ್ಕೆ ಬಿತ್ತು ಈಗ ಮತ್ತೊಂದು ಜವಾಬ್ದಾರಿ

ಎಸ್ಐಟಿ ತಂಡಕ್ಕೆ ಬಿತ್ತು ಈಗ ಮತ್ತೊಂದು ಜವಾಬ್ದಾರಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಕೋಟಿಗಟ್ಟಲೆ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತನಿಖೆಯನ್ನು ಎಸ್‌ ಐಟಿಗೆ ವಹಿಸಿದೆ.

ಹೌದು ಮಹರ್ಷಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಈಗ ಈ ಪ್ರಕರಣವನ್ನು ವಿಶೇಷ ತನಿಕಾ ತಂಡ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ಬೆನ್ನಲ್ಲೇ ಎಸ್ಐಟಿ ರಚಿಸಿ ಸರ್ಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.

ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ನಾಲ್ವರು ಐಪಿಎಸ್‌ ಅಧಿಕಾರಿಗಳೊಂದಿಗೆ ಎಸ್‌ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ವರದಿ ಆಧರಿಸಿಯೇ ಸಚಿವ ಬಿ.ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ SIT ವರದಿ ಬರುವವರೆಗೆ ಕಾದು ನೋಡಲು ಸರ್ಕಾರ ತೀರ್ಮಾನ ಮಾಡಿದೆ. ಇದನ್ನೂ ಓದಿ: ಭ್ರಷ್ಟಾರದಲ್ಲಿ ಮುಳುಗಿರುವ ಸರ್ಕಾರ ರಾಜ್ಯದಲ್ಲಿದೆ: ಬೊಮ್ಮಾಯಿ

ಪ್ರಕರಣ ವಿಚಾರವಾಗಿ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದ ಸಚಿವ ಬಿ.ನಾಗೇಂದ್ರ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ಪಾತ್ರ ಏನೂ ಇಲ್ಲ ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ. ಡೆತ್​ನೋಟ್​ನಲ್ಲಿ ಪದ್ಮನಾಭ್ ಹೆಸರಿದ್ದು ಸಚಿವರು ಎಂದು ಬಳಸಲಾಗಿದೆ ಆದರೆ ಇದರಲ್ಲಿ ನನ್ನ ಪಾತ್ರ ಇಲ್ಲ, ಈಗಾಗಲೇ ಈ ಬಗ್ಗೆ ಸ್ಪಷ್ಟಪಡಿಸಿದ್ದೀನಿ. ಯಾವುದೇ ಮೌಖಿಕ ಆದೇಶ ಮಾಡಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಬಳಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ ಸಿಐಡಿ ವರದಿಗಾಗಿ ಸಿಎಂ ಸಿದ್ದರಾಮಯ್ಯ ಕಾದು ಕೂತಿದ್ದಾರೆ. ಪ್ರಾಥಮಿಕ ವರದಿ ಆಧರಿಸಿ ಮುಂದಿನ ಕ್ರಮಕ್ಕೆ ನಿರ್ಧರಿಸಲಿದ್ದಾರೆ.

 

Related