ಸಾರಿಗೆ ನೌಕರರಿಗೆ ಮತ್ತೊಂದು ಶಾಕ್

ಸಾರಿಗೆ ನೌಕರರಿಗೆ ಮತ್ತೊಂದು ಶಾಕ್

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವಂತ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗದಂತೆ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸುತ್ತಿದ್ದಾರೆ. ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಅನಧಿಕೃತವಾಗಿ ಗೈರು ಹಾಜರಾದಂತ 251 ತರಬೇತಿ ಸಿಬ್ಬಂದಿಗಳನ್ನು ಕೆಎಸ್‌ಆರ್‌ಟಿಸಿ ಆಯ್ಕೆ ಪಟ್ಟಿಯಿಂದ ತೆಗೆದು ಹಾಕಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕ.ರಾ.ರ.ಸಾ ನಿಗಮವು ಮುಷ್ಕರದಲ್ಲಿ ನಿರತರಾಗಿದ್ದ ತರಬೇತಿ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾಗ್ಯೂ, ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ.ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲು ಕಾರಣರಾಗಿರುತ್ತಾರೆ.

Related