ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ..!

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ..!

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಡೆಂಗ್ಯೂ ಪ್ರಕರಣಗಳ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಕ್ಕೆ ಹಲವಾರು ಬಲಿಯಾಗಿದ್ದು ಇದರಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಅದರಲ್ಲೂ ಕೂಡ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಸ್ವಚ್ಛತೆಯ ಬಗ್ಗೆ ಮತ್ತಷ್ಟು ಜಾಗೃತಿಯನ್ನು ಮೂಡಿಸುತ್ತಿದ್ದು ಮನೆ ಸುತ್ತಮುತ್ತ ಸ್ವಚ್ಛಗೊಳಿಸುವಂತೆ ಕರೆ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಇದೀಗ ಡೆಂಗ್ಯೂ ಹೆಚ್ಚುತ್ತಿರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ಸ್ ಸ್ಥಾಪನೆ ಮಾಡಲು ಮುಂದಾಗಿದೆ. ಇದನ್ನೂ ಓದಿ:ಪ್ರಭಾಸ್ ಸಿನಿಮಾ ನೋಡಲು ಜಪಾನ್ ನಿಂದ ಭಾರತಕ್ಕೆ ಬಂದ ಪ್ರಭಾಸ್ ಫ್ಯಾನ್ಸ್

ಹೌದು, ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಿರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ಆರಂಭಿಸುವಂತೆ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಗ್ಯೂ ನಿಯಂತ್ರಣ ಕ್ರಮ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವೇಳೆ ಡೆಂಗ್ಯೂ ಹೆಚ್ಚಿರುವ ಪ್ರದೇಶಗಳನ್ನು ಪತ್ತೆ ಹಚ್ಚಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಇನ್ನು ಡೆಂಗ್ಯೂ ಹೆಚ್ಚಿರುವ ಪ್ರದೇಶದಲ್ಲಿ ಯಾರಿಗೆ ಜ್ವರ ಕಂಡು ಬಂದರೂ ಕಡ್ಡಾಯವಾಗಿ ಡೆಂಗ್ಯೂ ಪರೀಕ್ಷೆಗೊಳಪಡಿಸಬೇಕು. ಆರಂಭದಲ್ಲಿಯೇ ಡೆಂಗ್ಯೂ ಪತ್ತೆ ಹಚ್ಚಿದರೆ ಗುಣಪಡಿಸಲು ಸಾಧ್ಯವಿದೆ. ಒಂದು ವೇಳೆ ವಿಳಂಬವಾದರೆ ಸಾವುಗಳು ಸಂಭವಿಸಲಿವೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು ಎಂದು ಹೇಳಿದರು.

 

Related